ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

`ಶಾಲಾ ಕೈತೋಟದಿಂದ ಮಕ್ಕಳ ಪೌಷ್ಟಿಕತೆ ವೃದ್ಧಿ'

Last Updated 3 ಜುಲೈ 2013, 5:05 IST
ಅಕ್ಷರ ಗಾತ್ರ

ಶಿವಮೊಗ್ಗ: ಶಾಲೆ-ಅಂಗನವಾಡಿಗಳಲ್ಲಿ ಕೈತೋಟ ಮಾಡುವುದರಿಂದ ಮಕ್ಕಳಿಗೆ ಕೃಷಿ ಅನುಭವದ ಜತೆ ಉತ್ತಮ ಪೌಷ್ಟಿಕ ಆಹಾರವೂ ಸಿಗುತ್ತದೆ ಎಂದು ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್.ಕಮಲಾಕರ್ ಅಭಿಪ್ರಾಯಪಟ್ಟರು.

ನವುಲೆ ಕೃಷಿ ವಿಜ್ಞಾನ ಕೇಂದ್ರ ಹಾಗೂ ತೋಟಗಾರಿಕಾ ಇಲಾಖೆ ಆಶ್ರಯದಲ್ಲಿ  ನವುಲೆಯಲ್ಲಿ ಹಮ್ಮಿ ಕೊಂಡಿದ್ದ ಎರಡು ದಿನಗಳ `ಶಾಲೆ, ವಸತಿ ನಿಲಯ ಮತ್ತು ಅಂಗನವಾಡಿ ಕೇಂದ್ರಗಳಲ್ಲಿ  ಕೈತೋಟ ಪ್ರಾರಂಭ ಹಾಗೂ ನಿರ್ವಹಣೆ' ಕುರಿತ ತರಬೇತಿ ಶಿಬಿರದಲ್ಲಿ ಮಂಗಳವಾರ ಅವರು ಮಾತನಾಡಿದರು.

ಈ ಹಿಂದೆ ಸಹ ಸರ್ವಶಿಕ್ಷಣ ಅಭಿಯಾನ ಕಾರ್ಯಕ್ರಮದಡಿ ಶಾಲೆಗಳಲ್ಲಿ ಕೈತೋಟ ಪ್ರಾರಂಭಿಸುವ ಯೋಜನೆ ಹಮ್ಮಿಕೊಳ್ಳಲಾಗಿತ್ತು. ಆದರೆ, ಕೆಲವೊಂದು ಶಾಲೆಗಳಲ್ಲಿ ಮೂಲ ಸೌಕರ್ಯಗಳ ಕೊರತೆಯಿಂದ ಮುಂದುವರಿ ಸಲಾಗಿಲ್ಲ. ತರಬೇತಿಗೆ ಆಗಮಿಸಿದ ಎಲ್ಲಾ ಶಿಕ್ಷಕರು ಕೈತೋಟದ ಬಗ್ಗೆ ಮಾಹಿತಿ ಪಡೆದು, ನಂತರ ತಮ್ಮ ತಮ್ಮ ಶಾಲೆ ಮತ್ತು ಅಂಗನವಾಡಿ ಕೇಂದ್ರಗಳಲ್ಲಿ ಕೈತೋಟ ಪ್ರಾರಂಭಿಸ ಬೇಕು ಎಂದು ಸಲಹೆ ಮಾಡಿದರು.

ಕಾರ್ಯಕ್ರಮ ಉದ್ಘಾಟಿಸಿದ ತೋಟಗಾರಿಕಾ ಇಲಾಖೆ ಉಪ ನಿರ್ದೇಶಕ ಡಾ.ಎಂ.ವಿಶ್ವನಾಥ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಅಪೌಷ್ಟಿಕತೆ ಮುಖ್ಯವಾಗಿ ಮಹಿಳೆಯರು ಹಾಗೂ ಮಕ್ಕಳಲ್ಲಿ ಕಾಣಿಸಿಕೊಳ್ಳುತ್ತಿದ್ದು, ವಿವಿಧ ತರಕಾರಿ ಬೆಳೆಗಳನ್ನು ಸೇವಿಸುವುದರಿಂದ ಅಪೌಷ್ಟಿಕತೆಯಿಂದ ಮುಕ್ತಿ ಪಡೆಯಬಹುದು ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಕೃಷಿ ವಿಜ್ಞಾನ ಕೇಂದ್ರದ ವಿಷಯ ತಜ್ಞ ಡಾ.ಬಸವರಾಜ ಬೀರಣ್ಣವರ್ ಮಾತನಾಡಿ, ತರಬೇತಿಗೆ ಶಿವಮೊಗ್ಗ ತಾಲ್ಲೂಕಿನ ಒಟ್ಟು 40 ಶಾಲೆ, ವಸತಿ ನಿಲಯ ಹಾಗೂ ಅಂಗನವಾಡಿ ಕೇಂದ್ರಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದ್ದು, ಪ್ರತಿಯೊಂದು ಸಂಸ್ಥೆಯ ಒಬ್ಬ ಸಿಬ್ಬಂದಿಗೆ ಕೈತೋಟ ಪ್ರಾರಂಭ, ನಿರ್ವಹಣೆ, ಆಹಾರ ಮತ್ತು ಪೋಷಣೆ ಮುಂತಾದ ವಿಷಯಗಳ ಬಗ್ಗೆ ತರಬೇತಿ ನೀಡಿ ಮುಂದಿನ ದಿನಗಳಲ್ಲಿ ಶಾಲೆಯಲ್ಲಿ ದೊರೆಯುವ ಸ್ಥಳಾವಕಾಶ ಹಾಗೂ ಇನ್ನಿತರ ಸೌಕರ್ಯಗಳನ್ನು ಅವಲಂಬಿಸಿ ತೋಟಗಾರಿಕಾ ಸಸಿಗಳನ್ನು ವಿತರಿಸಲಾಗುವುದು ಎಂದರು.

ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ದಿವಾಕರ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ.ಬಿ.ಸಿ. ಹನುಮಂತಸ್ವಾಮಿ ವಹಿಸಿದ್ದರು.

ತೋಟಗಾರಿಕಾ ಇಲಾಖೆಯ ಸಹಾಯಕ ತೋಟಗಾರಿಕಾ ಅಧಿಕಾರಿ ಎಂ.ಬಿ.ನವೀನ್, ವಿಷಯತಜ್ಞ ಡಾ.ನಾಗರಾಜಪ್ಪ ಅಡಿವಪ್ಪರ್, ಸಹಾಯಕ ಪ್ರಾಧ್ಯಾಪಕಿ ಎಸ್.ಜಯಶ್ರೀ ಶಿಬಿರಾರ್ಥಿಗಳಿಗೆ ಮಾಹಿತಿ ನೀಡಿದರು. ಶಿಕ್ಷಕಿ ಗೀತಾ ಪ್ರಾರ್ಥಿಸಿದರು. ಡಾ.ಆರ್.ನಾಗರಾಜ ಕಾರ್ಯಕ್ರಮ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT