ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಲಾ ವಿದ್ಯಾರ್ಥಿಗಳಿಗೆ ಪ್ರವಾಸ

Last Updated 13 ಅಕ್ಟೋಬರ್ 2011, 7:05 IST
ಅಕ್ಷರ ಗಾತ್ರ

ಧಾರವಾಡ: ವಾರ್ತಾ ಇಲಾಖೆಯ ಧಾರವಾಡ ಹಾಗೂ ಬೆಳಗಾವಿ ಕಚೇರಿಗಳು ವಿಶೇಷ ಘಟಕ ಯೋಜನೆಯಡಿ ತಮ್ಮ ಜಿಲ್ಲೆಯ ತಲಾ 40 ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ಐದು ದಿನಗಳ ಶೈಕ್ಷಣಿಕ ಪ್ರವಾಸಕ್ಕೆ ಧಾರವಾಡದಲ್ಲಿ ಬುಧವಾರ ಜಿಲ್ಲಾಧಿಕಾರಿ ದರ್ಪಣ ಜೈನ್ ಹಸಿರು ನಿಶಾನೆ ತೋರಿದರು.

ಆಯಾ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಮೂಲಕ ಆಯ್ದ 20 ಬಾಲಕರು ಹಾಗೂ 20 ಬಾಲಕಿಯರು ಉತ್ತರ ಕನ್ನಡ, ದಕ್ಷಿಣ ಕನ್ನಡ, ಹಾಸನ, ಮೈಸೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ವಿವಿಧ ಶೈಕ್ಷಣಿಕ, ಐತಿಹಾಸಿಕ ಹಾಗೂ ಧಾರ್ಮಿಕ ಸ್ಥಳಗಳನ್ನು ವೀಕ್ಷಿಸಲಿದ್ದಾರೆ.

ಪ್ರವಾಸಕ್ಕೆ ಚಾಲನೆ ನೀಡಿದ ಸಮಾರಂಭದಲ್ಲಿ ವಾರ್ತಾ ಇಲಾಖೆಯ ಬೆಳಗಾವಿ ವಿಭಾಗದ ಉಪನಿರ್ದೇಶಕ ಬಸವರಾಜ ಕಂಬಿ, ಹಿರಿಯ ಸಹಾಯಕ ನಿರ್ದೇಶಕರಾದ ಪಿ.ಎಸ್. ಹಿರೇಮಠ, ಪಿ.ಎಸ್.ಪರ್ವತಿ, ಧಾರವಾಡ ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಎಸ್.ಎ. ಮುಲ್ಲಾ ಹಾಗೂ ವಾಯವ್ಯ ರಸ್ತೆ ಸಾರಿಗೆ ಸಂಸ್ಥೆಯ ಧಾರವಾಡ ಘಟಕ ವ್ಯವಸ್ಥಾಪಕ ಜಿ.ಎಸ್. ಬಂಗಾರಗುಂಡ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT