ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಲೆ ನಿಜವಾದ ದೇವಾಲಯ

Last Updated 13 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಯಲಹಂಕ: `ವಿದ್ಯೆ ನೀಡುವ ಮೂಲಕ ಮಕ್ಕಳ ಭವಿಷ್ಯವನ್ನು ಉತ್ತಮ ಮಟ್ಟದಲ್ಲಿ ರೂಪಿಸುವ ಪಾಠ ಶಾಲೆಗಳು ನಿಜವಾದ ದೇವಾಲಯಗಳು~ ಎಂದು ಮಾಜಿ ಸಚಿವ ಎ.ಕೃಷ್ಣಪ್ಪ ಅಭಿಪ್ರಾಯಪಟ್ಟರು.

ಬ್ಯಾಟರಾಯನಪುರ ಕ್ಷೇತ್ರ ವ್ಯಾಪ್ತಿಯ ಥಣಿಸಂದ್ರ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಜಯಗೋಪಾಲಗೌಡ ಅವರ ವತಿಯಿಂದ ಮಕ್ಕಳಿಗೆ ಉಚಿತವಾಗಿ ನೀಡಲಾದ ನೋಟ್ ಪುಸ್ತಕ ವಿತರಿಸಿ ಮಾತನಾಡಿದ ಅವರು, `ಭವಿಷ್ಯದಲ್ಲಿ ದೇಶವನ್ನು ಪ್ರಗತಿ ಪಥದಲ್ಲಿ ಕೊಂಡೊಯ್ಯುವಲ್ಲಿ ಮಕ್ಕಳ ಪಾತ್ರ ಅಮೂಲ್ಯವಾದುದು~ ಎಂದರು.

ಶಾಸಕ ಕೃಷ್ಣಬೈರೇಗೌಡ, `ಮಕ್ಕಳಿಗೆ ಉಚಿತವಾಗಿ ನೋಟ್ ಪುಸ್ತಕ ವಿತರಿಸಿದರು.   ಜಿ.ಪಂ. ಮಾಜಿ ಅಧ್ಯಕ್ಷ ರವಿಕುಮಾರ್, ನಗರಸಭಾ ಮಾಜಿ ಅಧ್ಯಕ್ಷರಾದ ಎಂ.ಹನುಮಂತೇಗೌಡ, ಶ್ರೀನಿವಾಸರಾಜು, ಕೆ.ಆರ್.ಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಮೂರ್ತಿ, ಗ್ರಾ.ಪಂ.ಮಾಜಿ ಅಧ್ಯಕ್ಷ ಡಿ.ಬಿ.ಸುರೇಶ್ ಇನ್ನಿತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT