ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಲೆಗಳಿಗೆ ಬೀಗ: ಜಿ.ಪಂ. ವಿರೋಧ

Last Updated 22 ಅಕ್ಟೋಬರ್ 2011, 6:15 IST
ಅಕ್ಷರ ಗಾತ್ರ

ಮಡಿಕೇರಿ: ಹತ್ತಕ್ಕಿಂತ ಕಡಿಮೆ ವಿದ್ಯಾರ್ಥಿಗಳು ಇರುವ ಶಾಲೆಗಳನ್ನು ಮುಚ್ಚಲು ಹೊರಟಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ಕೊಡಗು ಜಿಲ್ಲಾ ಪಂಚಾಯಿತಿ ವಿರೋಧ ವ್ಯಕ್ತಪಡಿಸಿದೆ.

ಶಾಲೆಯಲ್ಲಿ ಕೇವಲ ಒಬ್ಬನೇ ಒಬ್ಬ ವಿದ್ಯಾರ್ಥಿ ಇದ್ದರೂ ಕೂಡ ಅಂತಹ ಶಾಲೆಗಳನ್ನು ಮುಚ್ಚಬಾರದು.   ಜಿಲ್ಲೆಯ ಯಾವ ಶಾಲೆಗೂ ಬೀಗ ಹಾಕ ಬಾರದು ಎಂದು ಮೈಸೂರು-ಕೊಡಗು ಸಂಸದ ಎಚ್.ವಿಶ್ವನಾಥ್ ಅವರ ಅಧ್ಯ ಕ್ಷತೆಯಲ್ಲಿ ಶುಕ್ರವಾರ ನಡೆದ ಪ್ರಗತಿ ಪರಿ ಶೀಲನಾ ಸಭೆಯಲ್ಲಿ ಕೊಡಗು ಜಿಲ್ಲಾ ಪಂಚಾಯಿತಿ ಒಮ್ಮತದ ತೀರ್ಮಾನ ಕೈಗೊಂಡಿತು.

ಶಾಲೆಗಳಿಗೆ ಬೀಗ ಜಡಿಯುತ್ತ ಹೋದರೆ ಕನ್ನಡ ಭಾಷೆಯನ್ನು ಸಾಯಿ ಸಿದಂತೆ. ಈ ತಕ್ಷಣವೇ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಶಿಕ್ಷಣ ಇಲಾಖೆ ಮುಖ್ಯಸ್ಥರಿಗೆ ಪತ್ರ ಬರೆದು, ಕೊಡಗಿನ ಯಾವ ಶಾಲೆಗಳನ್ನು ಮುಚ್ಚ ಬಾರದೆಂದು ತಿಳಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ರವಿ ಕುಶಾಲಪ್ಪ ಹಾಗೂ ಜಿಲ್ಲಾಧಿಕಾರಿಗಳಿಗೆ ಸಂಸದರು ಸೂಚಿಸಿದರು.

ಮಕ್ಕಳಿಗೆ ಶಿಕ್ಷಣ ನೀಡುವುದು ಪುಣ್ಯದ ಕೆಲಸ. ಇಂತಹ ಸ್ಥಿತಿಯಲ್ಲಿ ಇರುವ ಶಾಲೆಗಳನ್ನು ಮಕ್ಕಳ ಸಂಖ್ಯೆ ಕಡಿಮೆಯಾಗಿದೆಯೆಂದು ಮುಚ್ಚಿಸು ವುದನ್ನು ಸಹಿಸಲು ಸಾಧ್ಯವಿಲ್ಲ. ದೇಶದಲ್ಲಿ ಈಗ ಅತಿ ಹೆಚ್ಚು ಹಣವನ್ನು ಶಿಕ್ಷಣಕ್ಕಾಗಿ ಖರ್ಚು ಮಾಡಲಾಗುತ್ತಿದೆ. ಹಲವಾರು ಕಾರ್ಯಕ್ರಮಗಳನ್ನು ಹಮ್ಮಿ ಕೊಳ್ಳಲಾಗುತ್ತಿದೆ. ಶಾಲೆಗಳನ್ನು ಮುಚ್ಚಿ ಸಿದರೆ ಇವೆಲ್ಲವುಗಳ ಶ್ರಮ ವ್ಯರ್ಥ ವಾದಂತೆ ಎಂದು ಸಂಸದ ಎಚ್. ವಿಶ್ವನಾಥ್ ಕಿಡಿಕಾರಿದರು.

ಪ್ರಾಥಮಿಕ ಶಿಕ್ಷಣವನ್ನು ಸುಧಾ ರಿಸಲು ಸರ್ವ ಶಿಕ್ಷಾ ಅಭಿಯಾನದಡಿ ನೂರಾರು ಕೋಟಿ ರೂಪಾಯಿಗಳನ್ನು ಖರ್ಚು ಮಾಡಲಾಗುತ್ತಿದೆ. ಆದಾಗ್ಯೂ, ಶಾಲೆಗಳಲ್ಲಿ ಮಕ್ಕಳ ಹಾಜರಾತಿ ಕಡಿಮೆ ಯಾಗುತ್ತಿದೆ ಎಂದರೆ ಏನರ್ಥ? ಶಾಲೆಗಳ ಸುತ್ತಮುತ್ತಲಿನ ಪ್ರದೇಶ ಗಳಿಂದ ಮಕ್ಕಳನ್ನು ಕರೆತರುವಂತೆ ಶಿಕ್ಷಕರಿಗೆ ಗುರಿ ನಿಗದಿಪಡಿಸಿ, ಇದನ್ನು ಪಾಲಿಸದ ಶಿಕ್ಷಕರ ವೇತನವನ್ನು ತಡೆ ಹಿಡಿಯಿರಿ ಎಂದು ಅವರು ಸಲಹೆ ನೀಡಿದರು.
 
ವಿದ್ಯಾರ್ಥಿಗಳ ಕೊರತೆ ಯಿಂದಾಗಿ ಜಿಲ್ಲೆಯ ಸುಮಾರು 13 ಶಾಲೆಗಳಿಗೆ ಬಾಗಿಲು ಹಾಕುವಂತೆ ಸರ್ಕಾರದಿಂದ ಆದೇಶ ಬಂದಿದೆ ಎಂದು ಸರ್ವ ಶಿಕ್ಷಾ ಅಭಿಯಾನದ ನೋಡಲ್ ಅಧಿಕಾರಿ ಶಂಕರ್ ಸಭೆಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT