ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಸಕ ವಿಶ್ವನಾಥ್‌ಗೆ ನಿರೀಕ್ಷಣಾ ಜಾಮೀನು

Last Updated 9 ಏಪ್ರಿಲ್ 2013, 20:05 IST
ಅಕ್ಷರ ಗಾತ್ರ

ಬೆಂಗಳೂರು: ಹೆಸರಘಟ್ಟ ಹೋಬಳಿಯ ಮಾದಪ್ಪನಹಳ್ಳಿಯ 32.04 ಎಕರೆ ಸರ್ಕಾರಿ ಜಮೀನು ಕಬಳಿಕೆ ಸಂಚಿನಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿರುವ ಯಲಹಂಕ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್ ಅವರಿಗೆ ಹೈಕೋರ್ಟ್ ಇದೇ 18ರವರೆಗೆ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

    ವಿಶ್ವನಾಥ್ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ ದಾಸ ಅವರು ಮಂಗಳವಾರ ಈ ಆದೇಶ ನೀಡಿದರು. ವಿಚಾರಣೆ ಮುಂದೂಡಲಾಗಿದೆ. ನಿರೀಕ್ಷಣಾ ಜಾಮೀನು ಕೋರಿ ವಿಶ್ವನಾಥ್ ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ ಅರ್ಜಿಸಲ್ಲಿಸಿದ್ದರು. ಅಲ್ಲಿ ಅವರ ಕೋರಿಕೆ ತಿರಸ್ಕೃತವಾಗಿತ್ತು.

ಅನಲಾಗ್ ಸಿಗ್ನಲ್
ಖಾಸಗಿ ಉಪಗ್ರಹ ವಾಹಿನಿಗಳ `ಅನಲಾಗ್' ಸಿಗ್ನಲ್‌ಗಳ ಪ್ರಸಾರವನ್ನು ಬುಧವಾರದವರೆಗೆ ಸ್ಥಗಿತಗೊಳಿಸದಂತೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಹಾಗೂ ಟೆಲಿಕಾಂ ನಿಯಂತ್ರಣ ಪ್ರಾಧಿಕಾರಕ್ಕೆ (ಟ್ರಾಯ್) ಹೈಕೋರ್ಟ್ ಮಂಗಳವಾರ ನಿರ್ದೇಶನ ನೀಡಿದೆ.

   ಸೆಟ್‌ಟಾಪ್ ಬಾಕ್ಸ್ ಅಳವಡಿಕೆಗೆ ಹೆಚ್ಚಿನ ಕಾಲಾವಕಾಶ ನೀಡಬೇಕು ಎಂದು ಕೋರಿ ಕೇಬಲ್ ಆಪರೇಟರ್‌ಗಳ ಸಂಘ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್. ಅಬ್ದುಲ್ ನಜೀರ್, ಈ ನಿರ್ದೇಶನ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT