ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಸಕ ಸೋಮಲಿಂಗಪ್ಪ ವಿರುದ್ಧ ತನಿಖೆಗೆ ಆದೇಶ

Last Updated 6 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಆದಾಯಕ್ಕಿಂತ ಹೆಚ್ಚಿಗೆ ಆಸ್ತಿ ಸಂಪಾದನೆ ಹಾಗೂ ಸರ್ಕಾರಿ ಜಮೀನು ಕಬಳಿಕೆ ಆರೋಪ ಹೊತ್ತ ಬಳ್ಳಾರಿ ಜಿಲ್ಲೆ ಸಿರಗುಪ್ಪದ ಬಿಜೆಪಿ ಶಾಸಕ ಎಂ.ಎಸ್.ಸೋಮಲಿಂಗಪ್ಪ ಅವರ ವಿರುದ್ಧ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲು ಮಾಡಿ ತನಿಖೆ ನಡೆಸುವಂತೆ ಲೋಕಾಯುಕ್ತ ವಿಶೇಷ ಕೋರ್ಟ್ ಸೋಮವಾರ ಆದೇಶಿಸಿದೆ.

ಸಿರಗುಪ್ಪದ ನಿವಾಸಿ ಈರಣ್ಣ ಎನ್ನುವವರು ದಾಖಲು ಮಾಡಿರುವ ದೂರಿಗೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ನ್ಯಾಯಾಧೀಶ ಎನ್.ಕೆ.ಸುಧೀಂದ್ರ ರಾವ್ ಈ ಆದೇಶ ಹೊರಡಿಸಿದ್ದಾರೆ.ತನಿಖಾ ವರದಿಯನ್ನು ಮಾರ್ಚ್ 12ರ ಒಳಗೆ ನೀಡುವಂತೆ ಲೋಕಾಯುಕ್ತ ಪೊಲೀಸರಿಗೆ ಆದೇಶಿಸಲಾಗಿದೆ.

`ಸೋಮಲಿಂಗಪ್ಪ ಸುಮಾರು 60 ಎಕರೆ ಸರ್ಕಾರಿ ಜಮೀನನ್ನು ಕಬಳಿಸಿದ್ದಾರೆ. ಇವರ ಒಟ್ಟು ಆದಾಯ ರೂ 13.14 ಲಕ್ಷ. ಆದರೆ 76 ಲಕ್ಷ ರೂಪಾಯಿ ಆಸ್ತಿ ಸಂಪಾದನೆ ಮಾಡಿರುವುದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ತನಿಖೆ ಅಗತ್ಯ~ ಎಂದಿದ್ದ ದೂರುದಾರರು, ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಅಡಿ ಇವರ ವಿರುದ್ಧ ಕ್ರಮಕ್ಕೆ ಆದೇಶಿಸುವಂತೆ ಕೋರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT