ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಸಕರ ನಿರ್ಲಕ್ಷ್ಯ: ಆರೋಪ

Last Updated 10 ಅಕ್ಟೋಬರ್ 2011, 9:50 IST
ಅಕ್ಷರ ಗಾತ್ರ

ಕೊರಟಗೆರೆ: ತಾಲ್ಲೂಕಿನ ಜನತೆ ಬರದಿಂದ ತತ್ತರಿಸುತ್ತಿದ್ದರೂ; ಶಾಸಕರ ನಿರ್ಲಕ್ಷ್ಯದಿಂದ ಕೊರಟಗೆರೆ ಬರಪೀಡಿತ ಪ್ರದೇಶ ಎಂದು ಘೋಷಣೆಯಾಗಿಲ್ಲ ಎಂದು ಮಾಜಿ ಶಾಸಕ ಗಂಗಹನುಮಯ್ಯ ದೂರಿದರು.

ಪಟ್ಟಣದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಕ್ಷೇತ್ರದ ಶಾಸಕ ಡಾ.ಜಿ.ಪರಮೇಶ್ವರ್ ಮತ ಹಾಕಿದ ಕ್ಷೇತ್ರದ ಜನರನ್ನು ಮರೆತಿದ್ದಾರೆ ಎಂದು ಆರೋಪಿಸಿದರು.

ಪಟ್ಟಣದ ಮುಖ್ಯ ರಸ್ತೆ ವಿಸ್ತರಣೆ ಸಂದರ್ಭದಲ್ಲಿ ಕಟ್ಟಡ ತೆರವು ಮಾಡಿ ಮೂರು ವರ್ಷಗಳಾದರೂ ರಸ್ತೆ ಅಭಿವೃದ್ಧಿ ಕಾಮಗಾರಿ ಆರಂಭವಾಗಿಲ್ಲ ಎಂದರು.

ಕೊರಟಗೆರೆ ತಾಲ್ಲೂಕು ಬರ ಪೀಡಿತ ಪ್ರದೇಶ ಎಂದು ಘೋಷಣೆ ಮಾಡಬೇಕೆಂದು ಒತ್ತಾಯಿಸಿ ಬಿಜಿಪಿ ತಾಲ್ಲೂಕು ಘಟಕದ ವತಿಯಿಂದ ನಿಯೋಗ ತೆರಳಿ ಜಿಲ್ಲಾಧಿಕಾರಿ, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಮುಖ್ಯಮಂತ್ರಿ ಭೇಟಿ ಮಾಡಿ ಪರಿಸ್ಥಿತಿ ವಿವರಿಸಲಾಗುವುದು ಎಂದರು.

ಮುಖಂಡರಾದ ತಿಮ್ಮಜ್ಜ, ಮಲ್ಲಣ್ಣ, ಟಿ.ರಾಮಚಂದ್ರ, ಆರ್.ಪಿ.ರವಿಶಂಕರ್ ಮತ್ತಿತರರು ಉಪಸ್ಥಿತರಿದ್ದರು.

ಬರ ಘೋಷಣೆಯಲ್ಲಿ ರಾಜಕೀಯ: ಆರೋಪ
ತೋವಿನಕೆರೆ: ರಾಜಕೀಯ ಹುನ್ನಾರದಿಂದ ಕೊರಟಗೆರೆ ತಾಲ್ಲೂಕನ್ನು ಬರಪೀಡಿತ ತಾಲ್ಲೂಕುಗಳ ಪಟ್ಟಿಗೆ ಸೇರಿಸಿಲ್ಲ ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಟಿ.ಡಿ.ಪ್ರಸನ್ನಕುಮಾರ್ ಆರೋಪಿಸಿದ್ದಾರೆ.

ಕೊರಟಗೆರೆ ಕ್ಷೇತ್ರದ ಜನರಲ್ಲಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರ ಹೆಸರನ್ನು ಕೆಡಿಸುವ ಉದ್ದೇಶದಿಂದಲೇ ತಾಲ್ಲೂಕನ್ನು ಬರಗಾಲ ಪೀಡಿತ ತಾಲ್ಲೂಕು ಎಂದು ಸರ್ಕಾರ ಘೋಷಿಸಿಲ್ಲ ಎಂದು ಅವರು ದೂರಿದ್ದಾರೆ.

ಜಿಲ್ಲೆಯ ವ್ಯಾಪ್ತಿಯಲ್ಲಿ ಕೊರಟಗೆರೆಗಿಂತ ಕಡಿಮೆ ಮಳೆ ಬಿದ್ದಿರುವ ತಾಲ್ಲೂಕುಗಳನ್ನು ಬರಪೀಡಿತ ಪಟ್ಟಿಯಲ್ಲಿ ಸೇರಿಸಲಾಗಿದೆ. ಸಾಕಷ್ಟು ನಷ್ಟ ಅನುಭವಿಸುತ್ತಿರುವ ತಾಲ್ಲೂಕನ್ನು ಮಾತ್ರ ಬರದ ಪಟ್ಟಿಗೆ ಸೇರಿಸಿಲ್ಲ ಎಂದು ಅವರು ಪ್ರಕಟಣೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೊಳವೆಬಾವಿ ಆಶ್ರಯದಿಂದ ಬೆಳೆ ಇಟ್ಟಿರುವ ಕೃಷಿಕರು ವಿದ್ಯುತ್ ಸಮಸ್ಯೆಯಿಂದ ಬಳಲುತ್ತಿದ್ದರೆ, ಕೆರೆ ನೀರಿನಿಂದ ಕೃಷಿ ಮಾಡಿರುವ ಕೃಷಿಕರು ನೀರಿಗಾಗಿ ಹಂಬಲಿಸುತ್ತಿದ್ದಾರೆ. ಜಾನುವಾರುಗಳಿಗೆ ಕುಡಿಯುವ ನೀರು, ಮೇವಿನ ಅಭಾವ ಈಗಾಗಲೇ ಆರಂಭವಾಗಿದೆ. ರಾಜ್ಯ ಸರ್ಕಾರ ಯಾವುದೇ ದುರುದ್ದೇಶ ಇಟ್ಟುಕೊಳ್ಳದೆ ಪರಿಸ್ಥಿತಿ ಅರ್ಥಮಾಡಿಕೊಳ್ಳಬೇಕು ಎಂದಿದ್ದಾರೆ.

ರಾಜಕೀಯ ಅನುಕೂಲಕ್ಕಾಗಿ ತಾಲ್ಲೂಕಿನ ಕೃಷಿಕರನ್ನು ಬಲಿ ಕೊಡುವುದು ಬೇಡ. ಇದರಿಂದ ರಾಜಕೀಯ ಲಾಭ ದೊರಕಬಹುದು ಎನ್ನುವ ಭ್ರಮೆ ಬಿಟ್ಟು, ತಾಲ್ಲೂಕನ್ನು ಬರಪೀಡಿತ ತಾಲ್ಲೂಕು ಎಂದು ಘೋಷಿಸಬೇಕು ಎಂದು ತಾಲ್ಲೂಕು ಪಂಚಾಯಿತಿ ಸದಸ್ಯರಾದ ಅಗ್ರಹಾರದ ಬಸವರಾಜು, ಬೂದಗವಿ ಜಿ.ಎಲ್.ಹನುಮಂತರಾಯಪ್ಪ, ಮಣುವಿನಕುರಿಕೆ ರವಿಕುಮಾರ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT