ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಸಕರ ಹೆಸರಿನ ನಾಮಫಲಕಕ್ಕೆ ಬಣ್ಣ

Last Updated 6 ಜುಲೈ 2012, 6:35 IST
ಅಕ್ಷರ ಗಾತ್ರ

ಚನ್ನಗಿರಿ: ಪಟ್ಟಣ ಪಂಚಾಯ್ತಿ ಹಾಗೂ ಇತರೆ ಸರ್ಕಾರಿ ಕಟ್ಟಡಗಳಿಗೆ ಸ್ಥಳೀಯ ಶಾಸಕರ ಹಾಗೂ ಮಾಜಿ ಶಾಸಕರ ಹೆಸರು ಇಟ್ಟಿರುವುದನ್ನು ತೆಗೆಯಬೇಕೆಂದು ಈಚೆಗೆ ಕೋರ್ಟ್ ಆದೇಶ ನೀಡಿದ್ದು, ಅದರಂತೆ ಗುರುವಾರ ನಾಮಫಲಕಕ್ಕೆ ಬಣ್ಣ ಬಳಿಯುವ ಕಾರ್ಯವನ್ನು ಪಟ್ಟಣ ಪಂಚಾಯ್ತಿ ಸಿಬ್ಬಂದಿ ನಿರ್ವಹಿಸಿದರು.

ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ ವತಿಯಿಂದ ನಿರ್ಮಾಣಗೊಂಡಿರುವ ತಾಲ್ಲೂಕು ಕ್ರೀಡಾಂಗಣಕ್ಕೆ ಸ್ಥಳೀಯ ಶಾಸಕರ ಹೆಸರನ್ನು ನಾಮಕರಣ ಮಾಡಿ ಬರೆಸಲಾಗಿತ್ತು. ಈ ಬಗ್ಗೆ ಕಾಂಗ್ರೆಸ್ ಕಾರ್ಯಕರ್ತರು 7 ಹಂತಗಳಲ್ಲಿ ಪಾದಯಾತ್ರೆ ನಡೆಸಿ, ನಂತರ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದರು.

ಕೋರ್ಟ್ ತೀರ್ಪಿನ ಆದೇಶದಂತೆ ರಾಜ್ಯ ಯಾವುದೇ ಸಾರ್ವಜನಿಕ ಸ್ಥಳ ಅಥವಾ ಸರ್ಕಾರಿ ಕಟ್ಟಡಗಳಿಗೆ ಜೀವಿತ ವ್ಯಕ್ತಿಗಳಾದ ಶಾಸಕ ಅಥವಾ ಸಂಸದರ ಹೆಸರನ್ನು ಇಡಬಾರದು. ಇಂತಹ ಹೆಸರು ಇಟ್ಟಿರುವುದು ಕಂಡುಬಂದಲ್ಲಿ ಸ್ಥಳೀಯ ಆಡಳಿತ ಅಂತಹ ಹೆಸರನ್ನು ತೆಗೆದುಹಾಕುವ ಕಾರ್ಯವನ್ನು ಕೈಗೊಳ್ಳಬೇಕೆಂದು ಆದೇಶ ನೀಡಿದೆ. ಅದರಂತೆ ಪಟ್ಟಣದಲ್ಲಿ ಈ ಹಿಂದೆ ಮಾಜಿ ಶಾಸಕರಾದ ವಡ್ನಾಳ್ ರಾಜಣ್ಣ ಅವರ ಹೆಸರನ್ನು ಇಟ್ಟಿರುವ ಸಮುದಾಯ ಭವನ, ಬಡಾವಣೆ, ರಂಗಮಂದಿರ ಹಾಗೂ ಮಾಡಾಳ್ ವಿರೂಪಾಕ್ಷಪ್ಪ ವಾಣಿಜ್ಯ ಸಂಕೀರ್ಣದ ಹೆಸರು ಹೊಂದಿರುವ ನಾಮಫಲಕಗಳ ಮೇಲೆ ಬಣ್ಣ ಬಳಿಸುತ್ತಿದ್ದೇವೆ ಎಂದು ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ಕೆ. ಪರಮೇಶ್ ಪತ್ರಿಕೆಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT