ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಕ ಸುಭದ್ರ ರಾಷ್ಟ್ರ ನಿರ್ಮಾಣದ ಶಿಲ್ಪಿ

Last Updated 24 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ಮಾನ್ವಿ: ಸತ್ಪ್ರಜೆಗಳನ್ನು ಸೃಷ್ಟಿಸುವ ಶಿಕ್ಷಕ ಸುಭದ್ರ ರಾಷ್ಟ್ರ ನಿರ್ಮಾಣದ ಶಿಲ್ಪಿ. ಆದ್ದರಿಂದ ಅಕ್ಷರ ಜ್ಞಾನ ನೀಡುವ ಶಿಕ್ಷಕ ವೃತ್ತಿ ಸರ್ವಶ್ರೇಷ್ಠ ಎಂದು ಶಾಸಕ ಜಿ.ಹಂಪಯ್ಯ ನಾಯಕ ಹೇಳಿದರು.

ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶಿಕ್ಷಣ ಇಲಾಖೆ ಶನಿವಾರ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಹಾಗೂ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ದೇಶದ ಪ್ರಗತಿ ಶೈಕ್ಷಣಿಕ ಪ್ರಗತಿಯನ್ನು ಅವಲಂಬಿಸಿದೆ. ಶೈಕ್ಷಣಿಕ ಅಭಿವೃದ್ಧಿಗಾಗಿ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತರುತ್ತಿದೆ. ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡಿದಾಗ ಮಾತ್ರ ಸರ್ಕಾರದ ಆಶಯ ಈಡೇರಲು ಸಾಧ್ಯ. ಈ ನಿಟ್ಟಿನಲ್ಲಿ ಶಿಕ್ಷಕರು ಇನ್ನೂ ಹೆಚ್ಚಿನ ರೀತಿಯಲ್ಲಿ ಜವಾಬ್ದಾರಿ ಹಾಗೂ ನಿಷ್ಠೆಯಿಂದ ಕಾರ್ಯ ನಿರ್ವಹಿಸುವುದು ಅವಶ್ಯಕ ಎಂದು ಅಭಿಪ್ರಾಯಪಟ್ಟರು.

ಯರಮರಸ್ ಡಯಟ್‌ನ ಪ್ರಾಚಾರ್ಯ ಶೇಷಗಿರಿರಾವ್ ಕುಲಕರ್ಣಿ ಮಾತನಾಡಿ, ಉತ್ತಮ ಸಾಧನೆ ಮೂಲಕ ಸಮಾಜಕ್ಕೆ ಕೊಡುಗೆ ನೀಡಲು ಶಿಕ್ಷಕ ವೃತ್ತಿಯಿಂದ ಮಾತ್ರ ಸಾಧ್ಯ ಎಂದು ಹೇಳಿದರು.

ಪ್ರಾಥಮಿಕ  ಹಾಗೂ ಪ್ರೌಢಶಾಲಾ ವಿಭಾಗದ ಒಟ್ಟು 13 ಜನ ಶಿಕ್ಷಕರಿಗೆ ತಾಲ್ಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಲಾಯಿತು. 5 ಜನ ನಿವೃತ್ತ ಶಿಕ್ಷಕರು ಹಾಗೂ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಇಬ್ಬರನ್ನು ಸನ್ಮಾನಿಸಲಾಯಿತು. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಸಯ್ಯ ಹಿರೇಮಠ ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ ಭಂಡಾರಿ, ಬಿಆರ್‌ಸಿ ಸಮನ್ವಯಾಧಿಕಾರಿ ಚಂದ್ರಶೇಖರ ದೊಡ್ಡಮನಿ ಮತ್ತಿತರ ಗಣ್ಯರು ವೇದಿಕೆಯಲ್ಲಿದ್ದರು.

ಗಿರೀಶ್ ಪ್ರಾರ್ಥಿಸಿದರು. ಸೂರ್ಯಕಾಂತ ಬಾರಕೇರ ಹಾಗೂ ಅಮರೇಶ ಹೂಗಾರ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT