ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಕರ ನಡವಳಿಕೆ ಸುಧಾರಣೆಗೆ ಸಲಹೆ

Last Updated 6 ಸೆಪ್ಟೆಂಬರ್ 2013, 9:30 IST
ಅಕ್ಷರ ಗಾತ್ರ

ಚನ್ನಪಟ್ಟಣ: `ಇತ್ತೀಚಿನ ದಿನಗಳಲ್ಲಿ ಮಾಧ್ಯಮಗಳಲ್ಲಿ ಕೆಲವು ಶಿಕ್ಷಕರ ನಡವಳಿಕೆ ಬಗ್ಗೆ ಬರುತ್ತಿರುವ ವರದಿಗಳನ್ನು ನೋಡಿದರೆ ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ' ಎಂದು ಸಾಹಿತಿ ಡಾ.ಕೆ.ಮರಳಸಿದ್ದಪ್ಪ ತೀವ್ರ ವಿಷಾದ ವ್ಯಕ್ತಪಡಿಸಿರು.

ಪಟ್ಟಣದ ಚೌಡೇಶ್ವರಿ ಕಲ್ಯಾಣ ಮಂಟಪದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಗುರುವಾರ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, `ಪ್ರಾಚೀನ ಶಿಕ್ಷಣ ಪದ್ದತಿಯಲ್ಲಿ ಗುರು ಪರಂಪರೆ ಇತ್ತು. ಆಧುನಿಕ ಶಿಕ್ಷಣ ಪದ್ಧತಿ ಆ ಗುರು ಪರಂಪರೆಯನ್ನು ಅಳಿಸಿದೆ.  ಶಿಕ್ಷಕರು ಉತ್ತಮ ಗುಣ, ನಡವಳಿಕೆ ಬೆಳೆಸಿಕೊಳ್ಳಬೇಕು' ಎಂದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ  ಶಾಸಕ ಸಿ.ಪಿ.ಯೋಗೇಶ್ವರ್ `ಆಧುನಿಕ ಜಗತ್ತಿನಲ್ಲಿ ಆರ್ಥಿಕ ಪರಿಸ್ಥಿಯನ್ನು ಸರಿದೂಗಿಸುವಂತಹ ಸಮಾಜಮುಖಿ ಹಾಗೂ ಶಿಸ್ತುಬದ್ಧ ವಿದ್ಯಾರ್ಥಿಗಳನ್ನು ತಯಾರು ಮಾಡುವ ಗುರುತರ ಜವಾಬ್ದಾರಿ ಶಿಕ್ಷಕ ಸಮುದಾಯದ ಮೇಲಿದೆ' ಎಂದು ಅಭಿಪ್ರಾಯಪಟ್ಟರು.

ಇದೇ ಸಂದರ್ಭದಲ್ಲಿ ಕಳೆದ ಸಾಲಿನಲ್ಲಿ ನಿವೃತ್ತರಾದ ಶಿಕ್ಷಕರನ್ನು ಸನ್ಮಾನಿಸಲಾಯಿತು. ಕೆಲವರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಲಾಯಿತು.

ವೇದಿಕೆಯಲ್ಲಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಪವಿತ್ರಾ ಕೃಷ್ಣೇಗೌಡ, ಉಪಾಧ್ಯಕ್ಷ ವೆಂಕಟೇಶ್, ಸದಸ್ಯರಾದ ಲಕ್ಕಮ್ಮ, ಹನುಮಂತಯ್ಯ, ತಹಶೀಲ್ದಾರ್ ಶಿವಸ್ವಾಮಿ, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿದ್ದೇಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ ಶಿವಪ್ಪ, ಕ್ಷೇತ್ರ ಸಮನ್ವಯಾಧಿಕಾರಿ ಎ.ಎನ್.ಅನಿಲ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT