ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಕರ ನೇಮಕಕ್ಕೆ ಆಗ್ರಹಿಸಿ ಧರಣಿ

Last Updated 11 ಜುಲೈ 2012, 8:15 IST
ಅಕ್ಷರ ಗಾತ್ರ

ಕುಣಿಗಲ್: ಶಿಕ್ಷಕರನ್ನು ನೇಮಿಸುವಂತೆ ಆಗ್ರಹಿಸಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು ಸೇರಿದಂತೆ ಗ್ರಾಮಸ್ಥರು ಶಾಲೆಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದ ಘಟನೆ ತಾಲ್ಲೂಕಿನ ಅಮೃತೂರು ಹೋಬಳಿ ಹಂಚೀಪುರ ಗ್ರಾಮದಲ್ಲಿ ಮಂಗಳವಾರ ನಡೆದಿದೆ.

ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 60 ವಿದ್ಯಾರ್ಥಿಗಳಿದ್ದು, ಕೇವಲ ಇಬ್ಬರು ಶಿಕ್ಷಕರು ಕಾರ್ಯ ನಿರ್ವಹಿಸುತ್ತಿದ್ದಾರೆ. ಅಗತ್ಯ ಶಿಕ್ಷಕರನ್ನು ನೇಮಿಸುವಂತೆ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಪ್ರಯೋಜನವಾಗದ ಕಾರಣ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮರಿತಿಮ್ಮಯ್ಯ, ಸದಸ್ಯರು ಮತ್ತು ಗ್ರಾಮಸ್ಥರು ಶಿಕ್ಷಕರು ಹಾಗೂ ವಿದ್ಯಾರ್ಥಿಗಳನ್ನು ಹೊರಗೆ ಕಳುಹಿಸಿ ಶಾಲೆಗೆ ಬೀಗ ಹಾಕಿ ಪ್ರತಿಭಟಿಸಿದರು.

ತಾಲ್ಲೂಕಿನಲ್ಲಿ 121ಶಿಕ್ಷಕರ ಕೊರತೆಯಿದ್ದು, ಹೆಚ್ಚುವರಿ ಶಿಕ್ಷಕರ ನಿಯೋಜನೆ ಸೇರಿದಂತೆ ವರ್ಗಾವಣೆ ಪ್ರಕ್ರಿಯೆ ನಡೆಯುತ್ತಿರುವ ಕಾರಣ ಕೆಲವೆಡೆಗಳಲ್ಲಿ ಶಿಕ್ಷಕರು ಕರ್ತವ್ಯಕ್ಕೆ ಹಾಜರಾಗುವುದು ವಿಳಂಬವಾಗುತ್ತಿದೆ. ಅದರಲ್ಲೂ, ಅಮೃತೂರು ಹೋಬಳಿಯ ಹಂಚೀಪುರ ಶಾಲೆಗೆ ಮಾರ್ಕೋನಹಳ್ಳಿ ಶಾಲೆಯ ಶಿಕ್ಷಕರೊಬ್ಬರನ್ನು ವರ್ಗಾವಣೆ ಮಾಡಲಾಗಿದೆ. ಉಳಿದಂತೆ ಯಡವಾಣಿ, ಸಣಬ ಶಾಲೆಗಳಲ್ಲಿಯೂ ಶಿಕ್ಷಕರ ಕೊರತೆಯಿದ್ದು ನಿಯೋಜನೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಬಿಇಒ ವಿ.ಜಿ.ಲೋಕೇಶ್ ತಿಳಿಸಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT