ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಕರಿಗೆ ನ್ಯಾಯ ಒದಗಿಸಿ

Last Updated 9 ಜನವರಿ 2012, 19:30 IST
ಅಕ್ಷರ ಗಾತ್ರ

ಕರ್ನಾಟಕ ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಡಿಯಲ್ಲಿ ಕಾರ್ಯನಿರ್ವಹಿಸುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯನ್ನು ನೇರ ನೇಮಕಾತಿ ಮೂಲಕ ಮಾಡಿಕೊಳ್ಳಲು ಸಂಘ ಮುಂದಾಗಿದೆ.

ಈ ಶಾಲೆಗಳಲ್ಲಿ ಐದಾರು ವರ್ಷಗಳಿಂದ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪ್ರಾಂಶುಪಾಲರು ಮತ್ತು ಶಿಕ್ಷಕರು ಮತ್ತಿತರರು ಇದರಿಂದ ಬೀದಿಗೆ ಬರುವಂತಾಗಿದೆ.

ಅವರನ್ನೇ ನಂಬಿಕೊಂಡಿರುವ ಅವರ ಕುಟುಂಬಗಳ ಗತಿ ಏನು? ಈ ಶಾಲೆಗಳನ್ನು ಕಟ್ಟಿ ಬೆಳೆಸಿದವರು ಈ (ನಾವು) ಶಿಕ್ಷಕರೇ.

ಇಷ್ಟು ವರ್ಷಗಳ ಕಾಲ ಅವರನ್ನು ದುಡಿಸಿಕೊಂಡು ಈಗ ಹೊರ ಹಾಕುವುದು ಸರಿಯಲ್ಲ. ಸರ್ಕಾರ ಅವರಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಒತ್ತಾಯಿಸುತ್ತೇವೆ.

 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT