ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

`ಶಿಕ್ಷಕರಿಗೆ ಸರಳ ಬದುಕು ಅವಶ್ಯ'

Last Updated 6 ಸೆಪ್ಟೆಂಬರ್ 2013, 8:56 IST
ಅಕ್ಷರ ಗಾತ್ರ

ದೇವನಹಳ್ಳಿ: `ಶಿಕ್ಷಕರು ತಮ್ಮ ವೃತ್ತಿಯೊಂದಿಗೆ ಸರಳ ಮತ್ತು ಸ್ವಾಭಿಮಾನದ ಬದುಕು ಕಂಡುಕೊಳ್ಳಲು ಪ್ರಯತ್ನಿಸಬೇಕು' ಎಂದು ಶಾಸಕ ಪಿಳ್ಳಮುನಿಶ್ಯಾಮಪ್ಪ ತಿಳಿಸಿದರು.

ದೇವನಹಳ್ಳಿ ಶ್ರಿವೆಂಕಟೇಶ್ವರ ವೈಭವ ಭವನದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ತಾಲ್ಲೂಕು ಆಡಳಿತ ವರ್ಗ ಸಂಯುಕ್ತಾಶ್ರಯದಲ್ಲಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಶಿಕ್ಷಕ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

`ದೇಶದಲ್ಲಿ ಅಭಿವೃದ್ಧಿಗೆ ಪೂರಕವಾಗಿ ಶಿಕ್ಷಣ ಅತ್ಯಂತ ಮಹತ್ವದ್ದು. ಸಮಾಜದಲ್ಲಿನ ಭ್ರಷ್ಟಾಚಾರ, ಸ್ವಜನ ಪಕ್ಷಪಾತ, ಜಾತೀಯತೆಯಂತಹ ಪಿಡುಗಗಳನ್ನು ಬೇರು ಮಟ್ಟದ್ಲ್ಲಲೇ ತೊಡೆದು ಹಾಕಲು ಶಿಕ್ಷಕರು ಮುಂದಾಗಬೇಕು. ತಮ್ಮನ್ನು ಹೆಚ್ಚು ಹೆಚ್ಚಾಗಿ ಸಾಮಾಜಿಕ ಸೇವೆಗಳಲ್ಲಿ  ತೊಡಗಿಸಿಕೊಳ್ಳಬೇಕು ' ಎಂದರು.

ತಹಶೀಲ್ದಾರ್ ಡಾ.ಎನ್.ಸಿ.ವೆಂಕಟರಾಜು, `ಶಿಕ್ಷಕರಿಗೆ ಸಮಾಜದಲ್ಲಿ ಉತ್ತಮ ಸ್ಥಾನವಿದ್ದು ಯಾರೂ ಅದಕ್ಕೆ ಚ್ಯುತಿ ತರುವ ಕೆಲಸ ಮಾಡಬಾರದು ಎಂದು ಕಿವಿಮಾತು ಹೇಳಿದರು.

ನಿವೃತ್ತ ಉಪನ್ಯಾಸಕ ಎಚ್.ಎಸ್.ನಾರಪ್ಪ ಮಾತನಾಡಿ, `ಇಂದು ಶಿಕ್ಷಕರ ಮನೋಭಾವನೆ ಬದಲಾಗಬೇಕು. ಅವರು ಹೆಚ್ಚಿನ ಆತ್ಮವಲೋಕನ ಮಾಡಿಕೊಳ್ಳಬೇಕು ಎಂದು ಹೇಳಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಮುನಿರಾಜು, ತಾ.ಪಂ.ಅಧ್ಯಕ್ಷೆ ರಾಧಿಕಾ, ಉಪಾಧ್ಯಕ್ಷ ಪಟಾಲಪ್ಪ, ಟಿ.ಎ.ಪಿ.ಸಿ.ಎಸ್ ಅಧ್ಯಕ್ಷ ಗಂಗಾಧರ್, ಜಿಲ್ಲಾ ಕೃಷಿಕ ಸಮಾಜ ನಿರ್ದೇಶಕ ರವಿಕುಮಾರ್, ತಾಲ್ಲೂಕು ಅಧ್ಯಕ್ಷ ಶ್ರಿನಿವಾಸಗೌಡ, ಬಿ.ಜೆ.ಪಿ ತಾಲ್ಲೂಕು ಅಧ್ಯಕ್ಷ ರಾಜ್‌ಗೋಪಾಲ್, ಹಾಪ್‌ಕಾಮ್ಸ ಮಾಜಿ ಅಧ್ಯಕ್ಷ ಬಿ.ಮುನೇಗೌಡ, ಪುರಸಭೆ ಸದಸ್ಯ ವಿ.ಗೋಪಾಲ್, ಪ್ರಾಥಮಿಕ ಶಾಲಾ ಶಿಕ್ಷಕ ಸಂಘ ಅಧ್ಯಕ್ಷ ನಾಗೇಶ್, ತಾಲ್ಲೂಕು ಸರ್ಕಾರಿ ನೌಕರರ ಸಂಘ ಅಧ್ಯಕ್ಷ ಹನುಮಂತರಾಯಪ್ಪ, ಕಾರ್ಯದರ್ಶಿ ಚಂದ್ರಶೇಖರ್, ಮುಖ್ಯ ಶಿಕ್ಷಕ ಸಂಘ ಅಧ್ಯಕ್ಷ ಶೇಷಾಚಲಯ್ಯ, ಪುರಸಭೆ ಮಾಜಿ ಅಧ್ಯಕ್ಷ ಲಕ್ಷ್ಮೀನಾರಾಯಣ, ಬಯಲು ಸೀಮೆ ಅಭಿವೃದ್ಧಿ ಅಧ್ಯಕ್ಷ ಕೃಷ್ಣಮೂರ್ತಿ ಇದ್ದರು.
ಸನ್ಮಾನಿತ ನಿವೃತ್ತ ಶಿಕ್ಷಕರು: ರಾಮಭದ್ರಯ್ಯ, ವರದಯ್ಯ, ವೆಂಕಟಪತಿ, ಶರ್ಘುನ್ನಿಸಾ, ಗಾಯಿತ್ರಿ ದೇವಿ, ವೆಂಕಟಕೃಷ್ಣಯ್ಯ, ಮುನಿರುದ್ರಪ್ಪ, ಸಲಿಮಾ ಬೇಗಂ, ವೆಂಕಟಸ್ವಾಮಿ, ಶೇಷಾದ್ರಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT