ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಣ ಇಲಾಖೆಯತ್ತ ಗಮನವಿರಲಿ

Last Updated 27 ಮೇ 2012, 19:30 IST
ಅಕ್ಷರ ಗಾತ್ರ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಶಿಕ್ಷಣ ಹಕ್ಕು ಕಾಯಿದೆಯ ಅನುಷ್ಠಾನಕ್ಕೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಕಾರದ ಬಗ್ಗೆ ಸಾರ್ವಜನಿಕರಿಗೆ ಅನುಮಾನಗಳಿವೆ. ಏಕೆಂದರೆ ಖಾಸಗಿ ಶಿಕ್ಷಣ ಸಂಸ್ಥೆಗಳ ಎಲ್ಲಾ ಅಕ್ರಮ ವ್ಯವಹಾರಗಳಿಗೆ ತರಬೇತಿ ದೊರೆಯುವುದೇ ಶಿಕ್ಷಣ ಇಲಾಖೆ ಅಧಿಕಾರಿಗಳಿಂದ.

ಖಾಸಗಿ ಶಿಕ್ಷಣ ಸಂಸ್ಥೆಗಳ ಕಾನೂನುಬಾಹಿರ ದಂಧೆಗಳು,ಅವ್ಯವಹಾರಗಳು ಮಕ್ಕಳಿಗೂ ಗೊತ್ತಿವೆ. ಆದರೆ ಶಿಕ್ಷಣ ಇಲಾಖೆ ಅಧಿಕಾರಿಗಳು ಮಾತ್ರ ಏನೂ ಗೊತ್ತಿಲ್ಲದವರಂತೆ ನಟಿಸುತ್ತಾರೆ. ಶಿಕ್ಷಣ ಹಕ್ಕು ಕಾಯಿದೆ ಅನುಷ್ಠಾನದ ವಿಷಯದಲ್ಲೂ ಇಲಾಖೆ ಜಾಣ ಕುರುಡು ಮತ್ತು ಕಿವುಡುತನ ಪ್ರದರ್ಶಿಸುವ ಸಾಧ್ಯತೆ ಇದೆ. ಶಿಕ್ಷಣ ಸಚಿವರು ಮತ್ತು ಹಿರಿಯ ಅಧಿಕಾರಿಗಳು ಈ ಕುರಿತು ಎಚ್ಚರವಹಿಸಬೇಕು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT