ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಣ ಕ್ಷೇತ್ರ ಅಪಮೌಲ್ಯ: ಸ್ವಾಮೀಜಿ

Last Updated 18 ಸೆಪ್ಟೆಂಬರ್ 2013, 6:21 IST
ಅಕ್ಷರ ಗಾತ್ರ

ಬಾಗೇಪಲ್ಲಿ: ಸಮಾಜಕ್ಕೆ ಬೆಳಕಾಗ ಬೇಕಾಗಿದ್ದ ಶಿಕ್ಷಣ ಕ್ಷೇತ್ರ ಅಪಮೌಲ್ಯ ವಾಗಿದೆ ಎಂದು ನಿಡುಮಾಮಿಡಿ ಮಠದ ಪೀಠಾಧ್ಯಕ್ಷ ವೀರಭದ್ರ ಚನ್ನಮಲ್ಲ ಸ್ವಾಮೀಜಿ ವಿಷಾದಿಸಿದರು.

ಪಟ್ಟಣದ ರಾಮಕೃಷ್ಣ ಕಲ್ಯಾಣ ಮಂಟಪದಲ್ಲಿ ಮಂಗಳವಾರ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ‘ಶಿಕ್ಷಣ ಕ್ಷೇತ್ರದಲ್ಲಿ ಮಾನವೀಯ ಗುಣಗಳು ಮಾಯ ವಾಗಿವೆ. ನಡವಳಿಕೆ, ಆದರ್ಶ ಬದಲಾ ಗುತ್ತಿದೆ. ಶಿಕ್ಷಣ ಕ್ಷೇತ್ರ ಭಿನ್ನವಾಗಿಲ್ಲ. ಬಡವ– ಶ್ರೀಮಂತರ ನಡುವೆ ಅಂತರ ಹೆಚ್ಚಾಗುತ್ತಿದೆ ಎಂದರು.

ಮಠಗಳು ರಾಜಕೀಯ ಶಕ್ತಿ ಕೇಂದ್ರ ಗಳಾಗದೆ ಸಮಾಜಕ್ಕೆ ಶುಭಸಂದೇಶ ನೀಡುವಂತಾಗಬೇಕು. ಆದರೆ ಕೆಲವು ಮಠಗಳಲ್ಲಿ ರಾಜಕೀಯ ಧ್ರುವೀಕರಣ ಆಗುತ್ತಿದೆ. ಪ್ರಜಾಪ್ರಭುತ್ವ ವ್ಯವಸ್ಥೆ ಯಲ್ಲಿ ಮತಗಳನ್ನು ಮಾರಾಟಕ್ಕೆ ಇಟ್ಟಿದ್ದಾರೆ ಎಂದು ತಿಳಿಸಿದರು.

ವಿಧಾನಪರಿಷತ್ ಸದಸ್ಯ ವೈ.ಎ. ನಾರಾಯಣಸ್ವಾಮಿ ಮಾತನಾಡಿ, ‘ಸರ್ಕಾರಿ ಹಾಗೂ ಅನುದಾನಿತ ಶಾಲೆ ಗಳಲ್ಲಿ ಬಿಸಿ ಊಟ, ಕ್ಷೀರ ಭಾಗ್ಯದಂತಹ ಕೆಲಸಗಳನ್ನು ಶಿಕ್ಷಕರು ನಿರ್ವಹಿಸುತ್ತಿ ರುವುದರಿಂದ ಶೈಕ್ಷಣಿಕ ಪ್ರಗತಿಗೆ ತೊಂದರೆ ಆಗುತ್ತಿದೆ. ಉತ್ತಮ ಶಿಕ್ಷಕರ ಆಯ್ಕೆಗೆ ಶಿಕ್ಷಕರು ಅರ್ಜಿ ಸಲ್ಲಿಸ ಬಾರದು. ಸರ್ಕಾರವೇ ಶಿಕ್ಷಕರನ್ನು ಗುರುತಿಸಿ ಪ್ರಶಸ್ತಿ ನೀಡಬೇಕು ಎಂದರು.

ಬಿ.ಎಸ್.ವಿಜಯಲಕ್ಷ್ಮೀ ಮತ್ತು ವಿ. ಮುನಿಯಪ್ಪ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದರು.  ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಶ್ರೀನಿವಾಸ್, ಗುಚ್ಛ ಸಂಪನ್ಮೂಲ ಆಂಜನೇಯಲು ವಿಭಾಗ ಮಟ್ಟದ ಪ್ರಶಸ್ತಿ ಪಡೆದರು.

ಶಾಸಕ ಎಸ್‌.ಎನ್‌.ಸುಬ್ಬಾರೆಡ್ಡಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಚಿನ್ನಪ್ಪ, ಸದಸ್ಯ ರಾದ ಸಾವಿತ್ರಮ್ಮ, ಅಮರಾವತಿ, ನಾರಾಯಣಮ್ಮ, ಕ್ಷೇತ್ರಶಿಕ್ಷಣಾಧಿಕಾರಿ ಕೆ.ವೆಂಕಟೇಶ್‌, ತಾಲ್ಲೂಕು ಪಂಚಾ ಯಿತಿ ಕಾರ್ಯನಿರ್ವಣಾಧಿಕಾರಿ ಶ್ರೀನಿವಾಸ್, ಅಧ್ಯಕ್ಷೆ ಮುನಿರತ್ನಮ್ಮ, ತಹಶೀಲ್ದಾರ್ ಎಂ.ಎ.ಪದ್ಮ, ಪುರಸಭಾ ಸದಸ್ಯ ಎ.ಪಿ.ಮಧುಸೂದನರೆಡ್ಡಿ, ಸರ್ಕಾರಿ ನೌಕರರ ಸಂಘ ಅಧ್ಯಕ್ಷ ಆರ್. ಹನುಮಂತರೆಡ್ಡಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ತಾಲ್ಲೂಕು ಅಧ್ಯಕ್ಷ ಡಿ.ಎನ್.ನಾರಾಯಣಸ್ವಾಮಿ ಶೆಟ್ಟಿ, ಬಿಆರ್‌ಸಿ ರೆಹಮಾನ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT