ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಣ ವ್ಯಾಪಾರೀಕರಣವಾಗುತ್ತಿದೆ

Last Updated 5 ಅಕ್ಟೋಬರ್ 2012, 18:30 IST
ಅಕ್ಷರ ಗಾತ್ರ

ಯಲಹಂಕ: `ಇತ್ತೀಚಿನ ದಿನಗಳಲ್ಲಿ ಶಿಕ್ಷಣ ವ್ಯಾಪಾರೀಕರಣವಾಗುತ್ತಿದೆ. ಇದರಿಂದಾಗಿ ಗುರು- ಶಿಷ್ಯರ ನಡುವೆ ಈ ಹಿಂದೆ ಇದ್ದಂತಹ ಸಂಬಂಧಗಳು ಮರೆಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆ~ ಎಂದು ಜಕ್ಕೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ಎನ್.ವಿಜಯಲಕ್ಷ್ಮಿ ವಿಷಾದ ವ್ಯಕ್ತಪಡಿಸಿದರು.

ಸರ್ಕಾರಿ ಮಾದರಿ ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿನ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿದ ಅವರು, ಶಿಕ್ಷಕರು ಮಹಾನ್ ವ್ಯಕ್ತಿಗಳ ಧ್ಯೇಯ, ಸಾಧನೆ ಮತ್ತು ಆದರ್ಶಗಳನ್ನು ಮೈಗೂಡಿಸಿಕೊಂಡು ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ಧಾರೆ ಎರೆಯಬೇಕು ಎಂದರು.

ಜಿ.ಪಂ. ಮಾಜಿ ಅಧ್ಯಕ್ಷ ರವಿಕುಮಾರ್ ಮಾತನಾಡಿ, ಗಣ್ಯರು ಉನ್ನತ ಸ್ಥಾನಗಳನ್ನು ಅಲಂಕರಿಸಿರುವುದಕ್ಕೆ ಶಿಕ್ಷಕರೇ ಮೂಲ ಕಾರಣ. ಅಂತಹ ಶಿಕ್ಷಕರನ್ನು ಪೂಜ್ಯ ಭಾವನೆಯಿಂದ ಕಾಣಬೇಕಾದ್ದು ನಮ್ಮೆಲ್ಲರ ಕರ್ತವ್ಯ ಎಂದು ಹೇಳಿದರು.

ಎಸ್‌ಡಿಎಂಸಿ ಅಧ್ಯಕ್ಷ ಬಿ.ರವಿಗೌಡ ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಾಂಶುಪಾಲ ಕೆ.ಎನ್.ಪ್ರಭುದೇವ, ನಗರಸಭೆ ಮಾಜಿ ಸದಸ್ಯ ಶ್ರೀನಿವಾಸ್, ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ರಾಮಪ್ಪ, ಉತ್ತರ ವಲಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಎಸ್.ಗಿರೀಶ್, ಎಸ್‌ಡಿಎಂಸಿ ಸದಸ್ಯ ಬಿ.ಜಯರಾಂ ಮೊದಲಾದವರು ಉಪಸ್ಥಿತರಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT