ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಣ ಹಕ್ಕು ಕಾಯ್ದೆ ಜಾರಿಗೆ ಎಚ್‌ಡಿಕೆ ಸಲಹೆ

Last Updated 21 ಮೇ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಶಿಕ್ಷಣ ಸಂಸ್ಥೆಗಳು ಬಡ ವಿದ್ಯಾರ್ಥಿಗಳ ಪ್ರವೇಶಕ್ಕೆ ಆದ್ಯತೆ ನೀಡಿ, ಶಿಕ್ಷಣ ಹಕ್ಕು ಕಾಯ್ದೆ ಸಮರ್ಪಕವಾಗಿ ಜಾರಿಯಾಗುವ ನಿಟ್ಟಿನಲ್ಲಿ ಸಹಕರಿಸಬೇಕು ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಸಲಹೆ ನೀಡಿದರು.

ಎಚ್‌ಎಂಆರ್ ಇಂಟರ್‌ನ್ಯಾಷನಲ್ ಸ್ಕೂಲ್ ನಗರದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

`ಸಾಮಾಜಿಕ ಕಂದಾಚಾರ ಮತ್ತು ತಾರತಮ್ಯಗಳನ್ನು ತೊಡೆದುಹಾಕಲು ಶಿಕ್ಷಣ ಒಂದು ಮೂಲ ಮಂತ್ರ. ವಿದ್ಯಾರ್ಥಿಗಳ  ಭವಿಷ್ಯವನ್ನು ಉತ್ತಮವಾಗಿ ರೂಪಿಸುವಲ್ಲಿ ಶೈಕ್ಷಣಿಕ ಸಂಸ್ಥೆಗಳು ಮಹತ್ತರ ಪಾತ್ರ ವಹಿಸುತ್ತವೆ~ ಎಂದು ಹೇಳಿದರು.

 ಮಾಜಿ ಸಚಿವ  ಪಿ.ಜಿ.ಆರ್.ಸಿಂಧ್ಯ, ಮಾಜಿ ಸಂಸದ ಸಿ.ನಾರಾಯಣಸ್ವಾಮಿ, ಎಚ್.ಎಂ.ಆರ್ ಇಂಟರ್‌ನ್ಯಾಷನಲ್ ಸ್ಕೂಲ್‌ನ ಮುಖ್ಯಸ್ಥ ಎಚ್. ಎಂ.ಅಮರೇಶ್‌ಗೌಡ ಇತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT