ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಣಕ್ಕೆ ಪ್ರಾಶಸ್ತ್ಯ ನೀಡಲು ಸಲಹೆ

Last Updated 12 ಅಕ್ಟೋಬರ್ 2011, 8:40 IST
ಅಕ್ಷರ ಗಾತ್ರ

ಕೊಳ್ಳೇಗಾಲ:  `ಹಿಂದುಳಿದ ಜನಾಂಗದವರು ಶಿಕ್ಷಣಕ್ಕೆ ಪ್ರಾಶಸ್ತ್ಯ ನೀಡಿದಾಗ ಅಭಿವೃದ್ಧಿ ಹೊಂದಲು ಸಾಧ್ಯ~ ಎಂದು ಶಾಸಕ ಆರ್. ನರೇಂದ್ರ ತಿಳಿಸಿದರು.

ಪಟ್ಟಣದ ನ್ಯಾಷನಲ್ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ವಾಲ್ಮೀಕಿ ಜಯಂತಿ ಪ್ರಯುಕ್ತ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ತಾಲ್ಲೂಕು ಆಡಳಿತದಿಂದ ಮಂಗಳವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಅವರು ಮಾತನಾಡಿದರು. ವಾಲ್ಮೀಕಿಯವರ ಆದರ್ಶ, ತತ್ವ, ನೀತಿಯನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಂಡಾಗ್ರ ಜಯಂತಿ ಆಚರಣೆಗೆ ಮಹತ್ವ ಬರುತ್ತದೆ ಎಂದರು.

ಶಾಸಕ ಜಿ.ಎನ್. ನಂಜುಂಡಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ತಾಪಂ ಅಧ್ಯಕ್ಷೆ ಶಶಿಕಲಾ, ಉಪಾಧ್ಯಕ್ಷ ಮಲ್ಲಯ್ಯ, ನಗರಸಭೆ ಉಪಾಧ್ಯಕ್ಷ ಜೆ. ಹರ್ಷ, ಜಿ.ಪಂ. ಸದಸ್ಯ ಕೊಪ್ಪಾಳಿ ಮಹದೇವನಾಯಕ, ಡಿ. ದೇವರಾಜು, ಶಿವಮ್ಮ, ಉಪವಿಭಾಗಾಧಿಕಾರಿ ಎ.ಬಿ. ಬಸವರಾಜು, ಡಿ.ವೈ.ಎಸ್.ಪಿ. ಎಚ್.ಆರ್. ಮಹದೇವಯ್ಯ, ತಾಲ್ಲೂಕು ನಾಯಕ ಸಂಘದ ಅಧ್ಯಕ್ಷ ಎಲ್. ಚಿಕ್ಕಲಿಂಗಯ್ಯ,ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಅಧ್ಯಕ್ಷ ಕೆ.ಎಂ.ಸುರೇಶ್‌ಕುಮಾರ್, ಉಪಾಧ್ಯಕ್ಷ ಎನ್.ಎಸ. ಮಹಾದೇವಸ್ವಾಮಿ, ಕಾರ್ಯದರ್ಶಿ ಮಲ್ಲಿಕಾರ್ಜುನ, ಹಿರಿಯ ತೋಟಗಾರಿಕೆ ನಿರ್ದೇಶಕ ಡಾ. ನಂಜಯ್ಯ, ತಾಲ್ಲೂಕು ಸಮಾಜ ಕಲ್ಯಾಣ ಅಧಿಕಾರಿ ಕೆಂಚಪ್ಪ ಇತರರು ಇದ್ದರು.

ಉಪನ್ಯಾಸಕ ಎಚ್.ಸೀಗನಾಯಕ ವಾಲ್ಮೀಕಿ ಜಯಂತಿ ಬಗ್ಗೆಉಪನ್ಯಾಸ ನೀಡಿದರು.
ಅದ್ದೂರಿ ಮೆರವಣಿಗೆ: ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ನಾಯಕ ಜನಾಂಗದ ವತಿಯಿಂದ ಪಟ್ಟಣದಲ್ಲಿ ಅದ್ದೂರಿ ಮೆರವಣಿಗೆ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT