ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಣದಿಂದ ಸಬಲೀಕರಣ: ಜಗದೀಶ್

Last Updated 13 ಅಕ್ಟೋಬರ್ 2011, 5:15 IST
ಅಕ್ಷರ ಗಾತ್ರ

ತರೀಕೆರೆ: ಶಿಕ್ಷಣದಿಂದ ಮಹಿಳೆಯರ ಸಬಲೀಕರಣ ಸಾಧ್ಯ. ಆದ್ದರಿಂದ ಪೊಷಕರು ತಮ್ಮ ಹೆಣ್ಣು ಮಕ್ಕಳಿಗೆ ಬಾಲ್ಯದಿಂದಲೇ ಕಡ್ಡಾಯ ಶಿಕ್ಷಣ ನೀಡಬೇಕು ಎಂದು ಸರ್ಕಾರಿ ಪ್ರಥಮದರ್ಜೆ ಕಾಲೇಜು ಪ್ರಾಧ್ಯಾಪಕ ಜಗದೀಶ್ ತಿಳಿಸಿದರು.

ತಾಲ್ಲೂಕಿನ ಅಮೃತಾಪುರ ಗ್ರಾಮದಲ್ಲಿ ಪಟ್ಟಣದ ಬಾಲಿಕಾ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ನಡೆಸುತ್ತಿರುವ ರಾಷ್ಟ್ರೀಯ ಸೇವಾ ಯೋಜನೆ ಶಿಬಿರದಲ್ಲಿ `ಶಿಕ್ಷಣ ಮತ್ತು ಮಹಿಳಾ ಸಬಲೀಕರಣ~ ಕುರಿತು ಅವರು ಮಾತನಾಡಿದರು.

ಹೆಣ್ಣು ಮಕ್ಕಳು ಕೀಳರಿಮೆ ಬಿಟ್ಟು ಸಂಕಷ್ಟದಲ್ಲಿರುವ ದುರ್ಬಲ ಹೆಣ್ಣುಮಕ್ಕಳ ರಕ್ಷಣೆಗೆ ಮುಂದಾಗಬೇಕು. ಮಹಿಳೆಯರು ತಮ್ಮ ಹಕ್ಕು, ಕಾನೂನನ್ನು ಅರಿತುಕೊಂಡು ಹಕ್ಕುಗಳನ್ನು ಪಡೆಯಲು ಪ್ರಯತ್ನಿಸಬೇಕು ಎಂದರು.
ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಚಂದ್ರಶೇಖರ್ `ಮೃದು ಕೌಶಲ~ದ ಬಗ್ಗೆ ಉಪನ್ಯಾಸ ನೀಡಿದರು.

ಬಾಲಿಕಾ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಅಭಿವೃದ್ಧಿ ಸಮಿತಿ ಅಧ್ಯಕ್ಷೆ ನಾಗರತ್ನ, ಸಹ ಶಿಕ್ಷಕ ಕುಮಾರಪ್ಪ, ಬಾಲಿಕಾ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಎನ್‌ಎಸ್‌ಎಸ್ ಅಧಿಕಾರಿ ಜಗದೀಶ್ ಇದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT