ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷೆಯಿಂದ ಪಾರು

Last Updated 19 ಡಿಸೆಂಬರ್ 2012, 19:59 IST
ಅಕ್ಷರ ಗಾತ್ರ

ಮೆಲ್ಬರ್ನ್ (ಪಿಟಿಐ):ಮಹಿಳಾ ರೋಗಿಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ಭಾರತೀಯ ಮೂಲದ ವೈದ್ಯರೊಬ್ಬರು ತಪ್ಪಿತಸ್ಥರು ಎಂದು ಸಾಬೀತಾಗಿದ್ದರೂ ಜೈಲು ಶಿಕ್ಷೆಯಿಂದ ಪಾರಾಗಿರುವ ಅಪರೂಪದ ಘಟನೆ ಆಸ್ಟ್ರೇಲಿಯಾದಲ್ಲಿ ನಡೆದಿದೆ.

2011ರ ಜನವರಿಯಲ್ಲಿ ಅಡಿಲೇಡ್‌ವುಡ್‌ವಿಲ್ಲೆ ವೆಸ್ಟ್ ಫಿಸಿಯೊಥೆರಪಿ ಕ್ಲಿನಿಕ್‌ನಲ್ಲಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಭರತ್ ದೇವದಾಸ್ (35) ಎಂಬುವವರು ತಪ್ಪಿತಸ್ಥರು ಎಂದು ಸಾಬೀತಾಗಿತ್ತು. ಬುಧವಾರ ಪ್ರಕರಣದ ವಿಚಾರಣೆ ಪೂರ್ಣಗೊಳಿಸಿದ ದಕ್ಷಿಣ ಆಸ್ಟ್ರೇಲಿಯಾ ಜಿಲ್ಲಾ ನ್ಯಾಯಾಧೀಶ ರೌಫ್ ಸೌಲಿಯೊ, ಆರೋಪಿ ದೇವದಾಸ್‌ಗೆ 2 ವರ್ಷ 6 ತಿಂಗಳು ಜೈಲು ಶಿಕ್ಷೆ ವಿಧಿಸಿದರು.  ಬಳಿಕ ಶಿಕ್ಷೆಯ ಅವಧಿ ರದ್ದುಗೊಳಿಸಿ 5 ಸಾವಿರ ಡಾಲರ್ ಸನ್ನಡತೆಯ ಬಾಂಡ್ ಬರೆದುಕೊಡಲು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT