ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಡ್ಲಘಟ್ಟ: ಸಂಭ್ರಮದ ಈದ್-ಮಿಲಾದ್ ಆಚರಣೆ

Last Updated 16 ಫೆಬ್ರುವರಿ 2011, 18:30 IST
ಅಕ್ಷರ ಗಾತ್ರ

ಶಿಡ್ಲಘಟ್ಟ: ಪಟ್ಟಣದೆಲ್ಲೆಡೆ ಈದ್-ಮಿಲಾದ್ ಹಬ್ಬವನ್ನು ಬುಧವಾರ ಶ್ರದ್ಧಾ ಭಕ್ತಿ, ವಿಜೃಂಭಣೆಯಿಂದ ಆಚರಿಸಲಾಯಿತು.ಮಹಮ್ಮದ್ ಪೈಗಂಬರ್ ಜನ್ಮದಿನದಂದು ಸಂಭ್ರಮದಿಂದ ಆಚರಿಸಲಾಗುವ ಈ ಹಬ್ಬದ ಹಿನ್ನೆಲೆಯಲ್ಲಿ ಪಟ್ಟಣದ ಪ್ರಮುಖ ಬೀದಿಗಳನ್ನು ಅಲಂಕರಿಸಲಾಗಿತ್ತು.

ಮಹಿಳೆಯರು ಸಿಹಿ ತಿಂಡಿಗಳನ್ನು ತಯಾರಿಸಿ ವಿತರಿಸಿದರು.ಕಿರಿಯರು ಮತ್ತು ಹಿರಿಯರು ಹೊಸ ಉಡುಪುಗಳನ್ನು ತೊಟ್ಟು ಸಂತಸಪಟ್ಟರು.ಎಲ್ಲರೂ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡು ಪರಸ್ಪರ ಶುಭ ಹಾರೈಸಿದರು.

ವಿವಿಧ ಬಡಾವಣೆಗಳಲ್ಲಿರುವ ಮಸೀದಿಗಳಲ್ಲಿ ಗುಂಪುಗೂಡಿದ ಬಹುತೇಕ ಮಂದಿ ನಂತರ ಪ್ರಮುಖ ಬೀದಿಗಳಲ್ಲಿ ಮೆರವಣಿಗೆಯಲ್ಲಿ ಸಾಗಿದರು.ಕಿರಿಯರು ಹೆಚ್ಚಿನ ಸಂಖ್ಯೆಯಲ್ಲಿ ಬಾವುಟಗಳನ್ನು ಹಿಡಿದುಕೊಂಡು ಮಹಮ್ಮದ್ ಪೈಗಂಬರ್ ಅವರನ್ನು ಸ್ಮರಿಸಿದರು.ಪ್ರಾರ್ಥನೆ ಸಲ್ಲಿಸಿದ ಬಳಿಕ ಮನೆಗಳಲ್ಲಿ ತಯಾರಿಸಲಾಗಿದ್ದ ಸಿಹಿ ತಿಂಡಿ ವಿತರಿಸಿದರು.

ಸಂಜೆ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಸಲಾಯಿತು.ಧರ್ಮಗುರುಗಳು ಉಪದೇಶ ಬೋಧಿಸಿದರು.ಎಲ್ಲ ಮಸೀದಿಗಳ ಅಧ್ಯಕ್ಷರು, ಕಾರ್ಯದರ್ಶಿಗಳು, ಪದಾಧಿಕಾರಿಗಳು,ಪಟ್ಟಣದ ಮುಸ್ಲಿಂ ಜನಾಂಗದ ಎಲ್ಲ ಹಿರಿಯರು ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದರು.ಹಬ್ಬದ ದಿನ ಶಾಂತಿ ಸುವ್ಯವಸ್ಥೆಗಾಗಿ ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT