ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿರಹಟ್ಟಿ: ಚಿರತೆಗಳ ಹಾವಳಿ

Last Updated 2 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಶಿರಹಟ್ಟಿ (ಗದಗ ಜಿಲ್ಲೆ): ತಾಲ್ಲೂಕಿನ ಕುಸಲಾಪುರ, ಮಜ್ಜೂರು, ಮಜ್ಜೂರು ತಾಂಡಾ, ಜಲ್ಲಿಗೇರಿ, ವರವಿ ಸೇರಿದಂತೆ ಹಲವು ಗ್ರಾಮಗಳಲ್ಲಿ ಕೆಲವು ದಿನಗಳಿಂದ ಚಿರತೆಗಳ ಹಾವಳಿಯಿಂದ ಗ್ರಾಮಸ್ಥರು ಭಯದ ನೆರಳಲ್ಲಿ ಬದುಕುವಂತಾಗಿದೆ.

4 ಆಕಳು, 2 ನಾಯಿ ಮತ್ತು 3 ಆಡುಗಳ ಮಾಂಸದ ರುಚಿಯನ್ನು ಕಂಡಿರುವ ಚಿರತೆಗಳ ಭಯದಿಂದ ಹೊಲಗಳಿಗೂ ಹೋಗಲು ಜನತೆ ಅಂಜುವಂತಾಗಿದೆ ಎಂದು ಮಜ್ಜೂರು ಗ್ರಾಮಸ್ಥರು `ಪ್ರಜಾವಾಣಿ~ಗೆ ತಿಳಿಸಿದರು.

ಅರಣ್ಯ ಸಿಬ್ಬಂದಿನಿರ್ಲಕ್ಷ್ಯ: ಚಿರತೆ ಹಾವಳಿ ಕುರಿತು ಅರಣ್ಯ ಇಲಾಖೆಯ ಗಮಕ್ಕೆ ತಂದರೂ ಪ್ರಯೋಜನವಾಗಿಲ್ಲ. ಕಾಟಾಚಾರಕ್ಕೆ ಆ ಪ್ರದೇಶದಲ್ಲಿ ಒಂದು ಸುತ್ತು ಹಾಕಿ ಕರ್ತವ್ಯ ಮುಗಿಯಿತು ಎಂಬಂತೆ ವರ್ತಿಸುತ್ತಾರೆ ಎಂದು ಗ್ರಾಮ ಪಂಚಾಯ್ತಿ ಸದಸ್ಯ ಬಾಷಾಸಾಬ್ ಜಂಗಳಿ ಹೇಳಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT