ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಳ್ಳೆಗಾರರ ರಕ್ಷಣಾ ಮಸೂದೆ ಮಂಡನೆ

Last Updated 14 ಆಗಸ್ಟ್ 2012, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಭ್ರಷ್ಟಾಚಾರ ಅಥವಾ ಸರ್ಕಾರಿ ನೌಕರರು ಮತ್ತು ಸಚಿವರು ಉದ್ದೇಶಪೂರ್ವಕವಾಗಿ ಅಧಿಕಾರ ದುರುಪಯೋಗ ಪಡಿಸಿಕೊಂಡಿರುವ ಬಗ್ಗೆ ಮಾಹಿತಿ ಬಹಿರಂಗಪಡಿಸುವವರಿಗೆ ರಕ್ಷಣೆ ನೀಡುವ ಕುರಿತ `ಶಿಳ್ಳೆಗಾರರ ರಕ್ಷಣಾ ಮಸೂದೆ-2011~ ಯನ್ನು ರಾಜ್ಯಸಭೆಯಲ್ಲಿ ಮಂಗಳವಾರ ಮಂಡಿಸಲಾಗಿದೆ.

ಲೋಕಸಭೆ ಈಗಾಗಲೇ ಅಂಗೀಕಾರವಾಗಿರುವ ಈ ಮಸೂದೆಯನ್ನು ಕೆಲವು ಸಣ್ಣಪುಟ್ಟ ತಿದ್ದುಪಡಿಗಳನ್ನು ಸೂಚಿಸಿ ಪ್ರಧಾನ ಮಂತ್ರಿಗಳ ಕಾರ್ಯಾಲಯದ ಸಚಿವ ವಿ. ನಾರಾಯಣಸ್ವಾಮಿ ಅವರು ರಾಜ್ಯಸಭೆಯಲ್ಲಿ ಮಂಡಿಸಿದರು.

ರಾಷ್ಟ್ರೀಯ ಭದ್ರತೆ, ಸಾರ್ವಭೌಮತ್ವ ಮತ್ತು ದೇಶದ ಏಕತೆಗೆ ಸಂಬಂಧಿಸಿದ ವಿಷಯಗಳನ್ನು ಈ ಮಸೂದೆ ವ್ಯಾಪ್ತಿಯಿಂದ ಹೊರಗಿಡುವ ತಿದ್ದುಪಡಿಯನ್ನು ಇದು ಒಳಗೊಂಡಿದೆ.

ರಕ್ಷಣಾ ಪಡೆ ಮತ್ತು ಬೇಹುಗಾರಿಕೆ ವಿಭಾಗದಲ್ಲಿನ ಭ್ರಷ್ಟಾಚಾರ ಮತ್ತು ಮಾನವ ಹಕ್ಕುಗಳ ಉಲ್ಲಂಘನೆಯನ್ನೂ ಈ ಮಸೂದೆ ಒಳಗೊಂಡಿದೆ ಎಂದು ಅವರು ಹೇಳಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT