ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಕಾವ್ಯವೇ ಸಿದ್ಧಾಂತ ಶಿಖಾಮಣಿ

Last Updated 19 ಫೆಬ್ರುವರಿ 2011, 6:40 IST
ಅಕ್ಷರ ಗಾತ್ರ

ಧಾರವಾಡ: ಮಾನವ ಧರ್ಮಕ್ಕೆ ಶ್ರೇಷ್ಠ ಜೀವನ ವಿಧಾನ ಬೋಧಿಸಿದ ಶಿವಕಾವ್ಯವೇ ಸಿದ್ಧಾಂತ ಶಿಖಾಮಣಿ ಎಂದು ವೀರಶೈವ ಧರ್ಮದ ಪಂಚಪೀಠಗಳಲ್ಲಿ ಒಂದಾದ ಕೇದಾರ ವೈರಾಗ್ಯ ಪೀಠದ ಜಗದ್ಗುರು ಭೀಮಾಶಂಕರಲಿಂಗ ಶಿವಾಚಾರ್ಯ ಭಗವತ್ಪಾದರು ಪ್ರತಿಪಾದಿಸಿದರು. ಅವರು ನಗರದ ಕಲಘಟಗಿ ರಸ್ತೆಯಲ್ಲಿ ಸೋಮೇಶ್ವರ ಬಳಿ ಇರುವ ಪೂರ್ಣಿಮಾ ಲೇ-ಔಟ್ ಆವರಣದಲ್ಲಿ ಶ್ರೀಜಗದ್ಗುರು ಪಂಚಾಚಾರ್ಯ ಮಾನವ ಧರ್ಮ ಸಂಸ್ಥೆಯ ಧಾರವಾಡ ಜಿಲ್ಲಾ ಘಟಕ ಹಾಗೂ ಶ್ರೀವೀರಭದ್ರೇಶ್ವರ ಇನ್ಫ್ರಾಸ್ಟ್ರಕ್ಚರ್ ಮತ್ತು ಹೌಸಿಂಗ್ ಸಂಸ್ಥೆಯ ಜಂಟಿ ಆಶ್ರಯದಲ್ಲಿ ಹಮ್ಮಿಕೊಂಡಿರುವ ಜನಜಾಗೃತಿ ಭಾವೈಕ್ಯ ಧರ್ಮ ಸಮಾವೇಶದ ಸಾನ್ನಿಧ್ಯವಹಿಸಿ ಮಾತನಾಡುತ್ತಿದ್ದರು.

ಗದಗ ಜಿಲ್ಲೆ ಸೂಡಿ ಜುಕ್ತಿ ಹಿರೇಮಠದ ಡಾ.ಕೊಟ್ಟೂರು ಬಸವೇಶ್ವರ ಶಿವಾಚಾರ್ಯ ಸ್ವಾಮೀಜಿ ಉಪನ್ಯಾಸ ನೀಡಿದರು. ನವಲಗುಂದ ತಾಲೂಕು ಶಿರಕೋಳ ಹಿರೇಮಠದ ಶ್ರೀಗುರುಸಿದ್ಧೇಶ್ವರ ಶಿವಾಚಾರ್ಯ ಸ್ವಾಮೀಜಿ, ಧಾರವಾಡ ತಾಲೂಕು ಅಮ್ಮಿನಬಾವಿ ಪಂಚಗೃಹ ಹಿರೇಮಠದ ಕಿರಿಯಶ್ರೀ ಅಭಿನವ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ, ಬೆಳಗಾವಿ ಜಿಲ್ಲೆ ಮುತ್ನಾಳ-ಬೆಟಸೂರ ಹಿರೇ     ಮಠದ   ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಉಪದೇಶಾಮೃತ ನೀಡಿದರು.

ವಿಧಾನ ಪರಿಷತ್ ಸದಸ್ಯ ಮೋಹನ ಲಿಂಬಿಕಾಯಿ, ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದತ್ತಾ ಡೋರ್ಲೆ, ಜಿ.ಪಂ.ಸದಸ್ಯೆ ಪ್ರೇಮಾ ಕುಮಾರದೇಸಾಯಿ, ಅಖಿಲ ಭಾರತ ವೀರಶೈವ ಮಹಾಸಭೆಯ ಧಾರವಾಡ ಜಿಲ್ಲಾಧ್ಯಕ್ಷರಾದ ಜಿ.ಜಿ. ದೊಡವಾಡ, ವೀರಶೈವ ಸಮಾಜದ ಗಣ್ಯರಾದ ಸಿ.ಆರ್. ಹಳ್ಳಿಗೇರಿಮಠ, ಶ್ರೀಜಗದ್ಗುರು ಪಂಚಾಚಾರ್ಯ ಮಾನವ ಧರ್ಮ ಸಂಸ್ಥೆಯ ಧಾರವಾಡ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಎಸ್.ಆರ್. ರಾಮನಗೌಡರ್, ಉದ್ಯಮಿ ಬಸವರಾಜ ತೊರಗಲ್ಲಮಠ, ಜಿ.ಪಂ.ಮಾಜಿ ಸದಸ್ಯ ನಿಜನಗೌಡ ಪಾಟೀಲ, ನ್ಯಾಯವಾದಿ ಎಸ್.ಎಸ್.ಬೇತೂರಮಠ, ಅಶೋಕ ಬೇಲೂರ ವೇದಿಕೆ ಯಲ್ಲಿದ್ದರು. ನಾಗನಗೌಡ ನೀರಲಗಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಬಸವರಾಜ ಕೌಜಲಗಿ ನಿರೂಪಿಸಿದರು.  ಎಸ್.ಎಚ್.ಪೂಜಾರ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT