ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಸ್ತು ರೂಢಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಸಲಹೆ

Last Updated 22 ಏಪ್ರಿಲ್ 2013, 8:07 IST
ಅಕ್ಷರ ಗಾತ್ರ

ಹಾಸನ: ವಿದ್ಯಾರ್ಥಿಗಳು ಜೀವನದಲ್ಲಿ ಸಮಯ ಪ್ರಜ್ಞೆ ಮೈಗೂಡಿಸಿಕೊಳ್ಳುವ ಮೂಲಕ ಉತ್ತಮ ಶಿಕ್ಷಣ ಪಡೆಯಬೇಕು ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದ ಕುಲಪತಿ ಪ್ರೊ.ಎಂ.ಜಿ. ಕೃಷ್ಣನ್ ಹೇಳಿದ್ದಾರೆ.

ನಗರದ ಸರ್ಕಾರಿ ಕಲಾ ಕಾಲೇಜಿನ ಸಾಂಸ್ಕೃತಿಕ ವೇದಿಕೆಯ ವತಿಯಿಂದ ಶನಿವಾರ ನಡೆದ ಸಾಂಸ್ಕೃತಿಕ ವೇದಿಕೆಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು `ಉನ್ನತ ಶಿಕ್ಷಣ ಪಡೆಯುವರ ಸಂಖ್ಯೆ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದ್ದು, ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆದು ಕೊಳ್ಳುವ ಮೂಲಕ ಜೀವನದಲ್ಲಿ ಹೆಚ್ಚಿನ ಅಧ್ಯಯನದಲ್ಲಿ ತೊಡಗಿಕೊಳ್ಳಬೇಕು' ಎಂದು ನುಡಿದರು.
ಒಕ್ಕಲಿಗರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಜಿ.ಎಲ್.ಮುದ್ದೇಗೌಡ ಮಾತನಾಡಿ `ವಿದ್ಯಾರ್ಥಿಗಳು ಕಾಲೇಜಿನಲ್ಲಿ ದೊರೆಯುವ ಸೌಲಭ್ಯವನ್ನು ಸದ್ಬಳಕೆ ಮಾಡಿಕೊಳ್ಳುವ ಮೂಲಕ ಜೀವನದಲ್ಲಿ ಉತ್ತಮ ಸಾಧನೆ ಮಾಡಬೇಕು' ಎಂದರು.

ಕಾಲೇಜು ಶಿಕ್ಷಣ ಇಲಾಖೆ ನಿರ್ದೇಶಕ ಭಾಗ್ಯಲಕ್ಷ್ಮಿ, ಪ್ರಾಂಶುಪಾಲ ಡಾ. ಐ.ಎಂ. ಮೋಹನ್, ಸ್ನಾತಕೋತ್ತರ ವಿಭಾಗದ ಸಂಯೋಜಕ ಪ್ರೊ. ಡಿ.ಜಿ. ಕೃಷ್ಣೇಗೌಡ ಹಾಗೂ ಇತರರು ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT