ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೀಘ್ರದಲ್ಲೇ ರಾಜಕೀಯ ನಡೆ ಬಗ್ಗೆ ನಿರ್ಧಾರ

Last Updated 3 ಸೆಪ್ಟೆಂಬರ್ 2011, 5:05 IST
ಅಕ್ಷರ ಗಾತ್ರ

ಗದಗ: `ಪ್ರಸಕ್ತ ರಾಜಕೀಯ ಬೆಳವಣಿಗೆ ಮನಸ್ಸಿಗೆ ತೀವ್ರ ನೋವು ಉಂಟು ಮಾಡಿದೆ. ಇದರಿಂದಾಗಿ ಮೂರ‌್ನಾಲ್ಕು ದಿನಗಳಲ್ಲಿ ತಮ್ಮ ರಾಜಕೀಯ ನಡೆ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ~ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿದರು.

ನಗರದಲ್ಲಿ ಶುಕ್ರವಾರ ಪತ್ರಕರ್ತ ರೊಂದಿಗೆ ಮಾತನಾಡಿದ ಅವರು, `ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಬೇರೆ ಪಕ್ಷದ ಕಾರ್ಯಕರ್ತರು ಸೇರಿದಂತೆ ಅಪಾರ ಜನತೆ ಪ್ರಸ್ತುತ ರಾಜಕೀಯದ ಬೆಳವಣಿಗೆ ಬಗ್ಗೆ ಚರ್ಚೆ ನಡೆಸಿದ್ದಾರೆ~ ಎಂದರು.

`ಸಚಿವ ಸಂಪುಟದಿಂದ ತಮ್ಮನ್ನು ಕೈಬಿಟ್ಟಿರುವ ಬಗ್ಗೆ ಕಾರ್ಯಕರ್ತರು ತೀವ್ರ ಅಸಮಾಧಾನಪಟ್ಟು ಕೊಂಡಿದ್ದಾ ರೆ. ಅವರು ತಮ್ಮ ರಾಜಕೀಯ ಬೆಳವಣಿಗೆ ಬಗ್ಗೆ ಪ್ರತಿದಿನ ತಮ್ಮಂದಿಗೆ ಚರ್ಚೆ ನಡೆಸುತ್ತಿದ್ದಾರೆ. ಮೂರ‌್ನಾಲ್ಕು ದಿನಗಳಲ್ಲಿ ರಾಜಕೀಯ ಊಹಾಪೋಹ ಗಳಿಗೆ ತೆರೆ ಎಳೆಯಲಾಗುವುದು~ ಎಂದರು.

ಹೊಸ ಪಕ್ಷ ಕಟ್ಟುವುದಾಗಲಿ ಹಾಗೂ ಜೆಡಿಎಸ್ ಸೇರುವುದಾಗಲಿ ಹಬ್ಬುತ್ತಿ ರುವ ವದಂತಿಗಳಿಗೆ ಸ್ಪಷ್ಟ ಮಾಹಿತಿ ನೀಡದ ಅವರು, ಉತ್ತರ ಕರ್ನಾಟಕದ ಎಲ್ಲಾ ಪಕ್ಷದ ಶಾಸಕರು ತಮ್ಮಂದಿಗೆ ಸತತ ಸಂಪರ್ಕದಲ್ಲಿದ್ದಾರೆ.  ರಾಜಕೀಯ ನಡೆಯ ಬಗ್ಗೆ ಹಲವಾರು ಬಾರಿ ಅವರೊಂದಿಗೆ ಚರ್ಚೆ ನಡೆ ಸಿದ್ದೇನೆ. ಶೀಘ್ರದಲ್ಲಿಯೇ ಎಲ್ಲಾ ವಿಷಯ ಗಳ ಕುರಿತು ಪ್ರಕಟಿಸಲಾಗುವುದು.

ಕಳೆದ 20 ವರ್ಷಗಳಿಂದ ಬಿಜೆಪಿ ಸಂಘಟನೆಗೆ ಶ್ರಮಿಸಿದ್ದೇನೆ. ಆದರೆ ಇಂದಿನ ಬೆಳವಣಿಗೆ ತಮಗೆ ತೀವ್ರ ನೋವು ಉಂಟು ಮಾಡಿದೆ. ಕಾರ್ಯ ಕರ್ತರು ಮತ್ತು ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ಇತರ ಪಕ್ಷದ ನಾಯಕರು ತಮ್ಮ ರಾಜಕೀಯ ವಿದ್ಯ ಮಾನಗಳ ಬಗ್ಗೆ ಸತತ ಸಂಪರ್ಕದಲ್ಲಿದ್ದು, ಬೆಂಬಲ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕೂಡಲೇ ತಮ್ಮ ನಿರ್ಧಾರವನ್ನು ಪ್ರಕಟಿಸುವುದಾಗಿ ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಶಿರಾಜ್ ಬಳ್ಳಾರಿ, ಲಕ್ಷ್ಮಣ ದೊಡ್ಡಮನಿ ಮತ್ತಿತರರು ಹಾಜರಿದ್ದರು.

ತೋಟಗಾರಿಕೆ: ರೈತರಿಗೆ ಸೂಚನೆ
ಮುಂಡರಗಿ: ತೋಟಗಾರಿಕೆ ಬೆಳೆಯನ್ನು ಉತ್ತೇಜಿಸಲು ಇಲಾಖೆಯಿಂದ ರೈತರಿಗೆ ವಿವಿಧ ಯೋಜನೆಗಳನ್ನು ಹಾಕಿ ಕೊಂಡಿದ್ದು ರೈತರು ಅವುಗಳ ಉಪ ಯೋಗ ಪಡೆದುಕೊಳ್ಳಬೇಕು ಎಂದು ತಾಲ್ಲೂಕು ತೋಟಗಾರಿಕೆ ಸಹಾಯಕ ನಿರ್ದೇಶಕ ಸುರೇಶ ಕುಂಬಾರ ತಿಳಿಸಿದ್ದಾರೆ.

ತಾಲ್ಲೂಕಿನ 100 ಜನ ರೈತರಿಗೆ ತೋಟಗಾರಿಕೆಯಲ್ಲಿ ಆಧುನಿಕ ತಂತ್ರ ಜ್ಞಾನ ಮತ್ತು ತರಕಾರಿ ಶೇಕರಣೆ ಕುರಿತ ತರಬೇತಿ ಕಾರ್ಯಾಗಾರವನ್ನು ಹಮ್ಮಿ ಕೊಳ್ಳಲಾಗಿದೆ. ತಾಲ್ಲೂಕಿನ ಆಯ್ದ 45 ರೈತರಿಗೆ ವಿವಿಧ ಬಗೆಯ ಹಣ್ಣಿನ ಸಸಿ ಗಳನ್ನು ವಿತರಿಸಲಾಗುವುದು. ಪರಿಶಿಷ್ಟ ಜಾತಿಯ 5 ಜನ ಹಾಗೂ ಪರಿಶಿಷ್ಟ ವರ್ಗದ ಇಬ್ಬರು ರೈತರಿಗೆ ತೆಂಗಿನ ತೋಟ ನಿರ್ಮಾಣಕ್ಕೆ ಸಹಾಯ ನೀಡ ಲಾಗುವುದು. 5 ಜನ ರೈತರಿಗೆ ತುಂತುರು ನೀರಾವರಿ ಸಲಕರಣೆ ನೀಡ ಲಾಗುವುದು ಎಂದು ವಿವರಿಸಿದ್ದಾರೆ.

ಯೋಜನೆಯ ಸದುಪಯೋಗ ಪಡೆದುಕೊಳ್ಳಲು ಇಚ್ಛಿಸುವ ತಾಲ್ಲೂಕಿನ ರೈತರು ನಿಗದಿತ ಅರ್ಜಿ ನಮೂನೆಯಲ್ಲಿ ಅಗತ್ಯ ದಾಖಲೆ ಗಳೊಂದಿಗೆ ಸೆ. 7ರೊಳಗೆ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕು ತೋಟಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಸೂಚಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT