ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೀಘ್ರವೇ ಸಚಿವರ ಅಭಿಪ್ರಾಯ ಸಂಗ್ರಹ

Last Updated 22 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಶಿಕ್ಷಣ ಆಯೋಗ ರಚನೆಗೆ ಸಂಬಂಧಿಸಿದಂತೆ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಶೀಘ್ರವೇ ವಿವಿಧ ಸಚಿವರ ಅನಿಸಿಕೆಗಳನ್ನು ಪಡೆಯಲಿದೆ. ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಶಿಕ್ಷಣ ಆಯೋಗ ರಚಿಸುವುದಾಗಿ ಘೋಷಿಸಿದ್ದರು.

ಈ ಆಯೋಗವು, ಶಿಕ್ಷಣ ಕ್ಷೇತ್ರದ ಎಲ್ಲ ಆಯಾಮಗಳನ್ನೂ ಪರಿಶೀಲಿಸಿ ಸುಧಾರಣೆಗೆ ಶಿಫಾರಸು ಮಾಡಲಿದೆ ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಔದ್ಯೋಗಿಕ ಶಿಕ್ಷಣ ಹಾಗೂ ಕೌಶಲ ಅಭಿವೃದ್ಧಿಗೆ ಆದ್ಯತೆ ನೀಡಬೇಕಾಗಿದ್ದು, ಈ ದಿಸೆಯಲ್ಲಿ ಮಹತ್ವದ ಬದಲಾವಣೆಗೆ ಸರ್ಕಾರವು ಶಿಕ್ಷಣ ಆಯೋಗ ರಚಿಸಲು ನಿರ್ಧರಿಸಿದೆ ಎಂದು ಪ್ರಧಾನಿ ಹೇಳಿದ್ದರು.

ಶಿಕ್ಷಣ ಕ್ಷೇತ್ರ ಯಾವ ದಿಕ್ಕಿಗೆ ಚಲಿಸಬೇಕು, ಎಲ್ಲಿ ಹೆಚ್ಚಿನ ಗಮನ ಹರಿಸಬೇಕು- ಇತ್ಯಾದಿ ವಿಷಯಗಳಿಗೆ ಸಂಬಂಧಿಸಿದಂತೆ ಆಯೋಗ ಶಿಫಾರಸು ನೀಡುವ ಸಾಧ್ಯತೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT