ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶುದ್ಧ ಚಾರಿತ್ರ್ಯ: ಶಿಕ್ಷಕರಿಗೆ ಸ್ವಾಮೀಜಿ ಸಲಹೆ

Last Updated 22 ಜನವರಿ 2011, 7:25 IST
ಅಕ್ಷರ ಗಾತ್ರ

ವಿಜಾಪುರ: ‘ಶಿಕ್ಷಕರ ಚಾರಿತ್ರ್ಯ ಮಕ್ಕಳ ಮೇಲೆ ಪ್ರಭಾವ ಬೀರುತ್ತದೆ. ಶಿಕ್ಷಕರಾದವರು ಶುದ್ಧ ಚಾರಿತ್ರ್ಯ ಹೊಂದಿರಬೇಕು’ ಎಂದು ಜ್ಞಾನಯೋಗಾಶ್ರಮದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು.

ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಸಹಯೋಗದಲ್ಲಿ ಇಲ್ಲಿಯ ಅಭಿನವ ಡಿ.ಇಡಿ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ತಾಲ್ಲೂಕು ಮಟ್ಟದ ಯುವಜನೋತ್ಸವದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

ಸಾನಿಧ್ಯ ವಹಿಸಿದ್ದ ಷಣ್ಮುಖಾರೂಢಮಠದ ಶ್ರೀ ಅಭಿನವ ಶಿವಪುತ್ರ ಸ್ವಾಮೀಜಿ, ಇಂದಿನ ಶಿಕ್ಷಣ ಸಂಸ್ಥೆಗಳು ದೇಶಕ್ಕಾಗಿ ಕೊಡುಗೆ ನೀಡುವ ಕೆಲಸ ಮಾಡಬೇಕು. ಪ್ರತಿಯೊಬ್ಬ ಪ್ರಶಿಕ್ಷಣಾರ್ಥಿ ಕಾಯಕ, ವರ್ತನೆ, ಶಿಕ್ಷಣ ಮುಂತಾದ ಅಂಶಗಳನ್ನು ಮೈಗೂಡಿಸಿಕೊಂಡು ಉತ್ತಮ ನಾಗರಿಕರಾಗಬೇಕು ಎಂದು ಸಲಹೆ ಮಾಡಿದರು.
ಮುಖ್ಯ ಅತಿಥಿಯಾಗಿದ್ದ ಪ್ರೊ.ಎಸ್.ಜೆ. ಇಜೇರಿ, ಅಧ್ಯಕ್ಷತೆ ವಹಿಸಿದ್ದ ಎಸ್.ಎಸ್. ತಂಬಾಕೆ, ಡೈಟ್‌ನ ಎನ್.ಎಸ್.ಎಸ್. ಕಾರ್ಯಕ್ರಮ ಅಧಿಕಾರಿ ಆರ್.ಎಸ್. ಬಗಲಿ ಮಾತನಾಡಿದರು.

ಎ.ಜಿ. ಪೆಂಡಾರಿ, ಅಭಿನವ ವಿದ್ಯಾ ಸಂಸ್ಥೆಯ ಎನ್.ಎಸ್. ಹಿರೇಮಠ, ಎಲ್.ಟಿ. ಹುಲಮನಿ, ವಿ.ಕೆ. ರಜಪೂತ, ಜೆ.ಎಂ. ಇರಸೂರ, ಎಂ.ಬಿ. ವಾಲಿ, ಆರ್.ಎಲ್. ಬೀಳೂರ, ಬಿ.ಜಿ. ರುದ್ರಾಕ್ಷಿ, ಪಿ.ಎಂ. ಬಳಗಾನೂರ, ಬಿ.ಪಿ. ಉಕ್ಕಲಿ, ಎಸ್.ಜಿ. ಹಡಪದ, ಬಸವರಾಜ ಪಾಟೀಲ ಮುಂತಾದವರು ಉಪಸ್ಥಿತರಿದ್ದರು.ಪಿ.ಆರ್. ಡೋಣೂರ ಸ್ವಾಗತಿಸಿದರು. ಉಪನ್ಯಾಸಕ ಎಸ್.ಎಸ್. ಕನ್ನೂರ ಕಾರ್ಯಕ್ರಮ ನಿರೂಪಿಸಿದರು. ಯು.ಎಸ್. ಹಿರೇಮಠ ವಂದಿಸಿದರು.


 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT