ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶುದ್ಧನೀರು ಘಟಕ ಉದ್ಘಾಟನೆ

Last Updated 12 ಜೂನ್ 2011, 19:30 IST
ಅಕ್ಷರ ಗಾತ್ರ

ಗದಗ: `ಶುದ್ಧನೀರು~ ಯೋಜನೆಯ 5ನೇ ಘಟಕ ತಾಲ್ಲೂಕಿನ ಬಿಂಕದಕಟ್ಟಿ ಗ್ರಾಮದಲ್ಲಿ ಭಾನುವಾರ ಆರಂಭಗೊಂಡಿತು.ರಾಮಕೃಷ್ಣ ವಿವೇಕಾನಂದ ಆಶ್ರಮದ ನಿರ್ಭಯಾನಂದ ಸ್ವಾಮೀಜಿ ಅವರು ಶುದ್ಧನೀರು ಘಟಕವನ್ನು ಸಾರ್ವಜನಿಕರ ಬಳಕೆಗಾಗಿ ಸಮರ್ಪಿಸಿದರು. ಕೆ.ಎಚ್. ಪಾಟೀಲ ಪ್ರತಿಷ್ಠಾನ ಹಾಗೂ ಗ್ರಾಮೀಣ ಆರೋಗ್ಯ ಸಂಸ್ಥೆ ಸಹಯೋಗದಲ್ಲಿ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ.

ಮಾಜಿ ಸಚಿವ ಎಚ್.ಕೆ. ಪಾಟೀಲ ಹಾಗೂ ಮಾಜಿ ಶಾಸಕ ಡಿ.ಆರ್. ಪಾಟೀಲ ಅವರು ಕುಡಿಯುವ ಶುದ್ಧ ನೀರಿನ ಮೊದಲ ಕ್ಯಾನನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಂದರವ್ವ ಬೇವಿನಕಟ್ಟಿ, ಉಪಾಧ್ಯಕ್ಷೆ ರೇಣುಕಾ ಬಸವರಾಜ ಖಾನಾಪುರ ಅವರಿಗೆ ನೀಡಿದರು.ಈ ಕುರಿತು ಮಾಜಿ ಸಚಿವ ಎಚ್.ಕೆ. ಪಾಟೀಲ ವಿವರ ನೀಡಿದರು.

ಮಾಜಿ ರಾಜ್ಯಸಭಾ ಸದಸ್ಯ ಸಚ್ಚಿದಾನಂದ ಸ್ವಾಮಿ, ಮಾಜಿ ಸಚಿವರಾದ ಕೆ.ಬಿ. ಕೋಳಿವಾಡ, ಎ.ಎಂ. ಹಿಂಡಸಗೇರಿ, ಮಾಜಿ ಶಾಸಕ ಎಸ್.ಜಿ. ನಂಜಯ್ಯನಮಠ, ಜಿಲ್ಲಾ ಪಂಚಾಯಿತಿ ಸದಸ್ಯ ರೇವಣಪ್ಪ ಕೊಂಡಿಕೊಪ್ಪ, ತಾಲ್ಲೂಕು ಪಂಚಾಯಿತಿ ಸದಸ್ಯೆ ಶಿವಗಂಗಾ ಶಿವರಡ್ಡಿ ಭೂಮಕ್ಕನವರ, ಡಿ.ಬಿ. ತಿರ್ಲಾಪುರ, ವಿ.ಡಿ. ರಂಗಪ್ಪನವರ, ಕೆ.ಎಚ್. ನಡುವಿನಮನಿ, ಆರ್.ಪಿ. ಹುಚ್ಚಣ್ಣವರ, ಗ್ರಾಮೀಣ ಆರೋಗ್ಯ ಸಂಸ್ಥೆಯ ಡಾ. ಎಸ್.ಆರ್. ನಾಗನೂರ ಹಾಗೂ ಇತರರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT