ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶುರುವಾಯ್ತು ಮೋದಿ ಮಂತ್ರಾಲೋಚನೆ

Last Updated 18 ಮೇ 2014, 12:57 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ನೂತನ ಸರ್ಕಾರ ರಚನೆಗೆ ಸಂಬಂಧಿತ ಕಾರ್ಯತಂತ್ರ ಕುರಿತಂತೆ ಭಾನುವಾರ ತಮ್ಮ ಆಪ್ತವಲಯದೊಂದಿಗೆ ಸಮಾಲೋಚನೆ ನಡೆಸಿದ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರು ಬಳಿಕ ಪಕ್ಷದ ಹಿರಿಯ ಮುಖಂಡ ಎಲ್.ಕೆ. ಅಡ್ವಾಣಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಅಡ್ವಾಣಿ ಅವರ ಭೇಟಿಗೂ ಮುನ್ನ ಗುಜರಾತ್ ಭವನದಲ್ಲಿ ಮೋದಿ ಅವರು ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್‍.ಯಡಿಯೂರಪ್ಪ, ಪಕ್ಷದ ಬಿಹಾರ ಉಸ್ತುವಾರಿ ಧರ್ಮೇಂದ್ರ ಪ್ರಧಾನ್‍ ಮತ್ತು ತಮ್ಮ ಆಪ್ತ ವಲಯಕ್ಕೆ ಸೇರಿದ ಅಮೀತ್‍ ಷಾ ಹಾಗೂ ಜೆ.ಪಿ.ನಡ್ಡಾ ಅವರೊಂದಿಗೆ ಮಾತುಕತೆ ನಡೆಸಿದರು.

ಬಳಿಕ ನೇರವಾಗಿ ಅಡ್ವಾಣಿ ಅವರ ನಿವಾಸಕ್ಕೆ ತೆರಳಿದ ಮೋದಿ ಅವರು ರಾಜಕೀಯ ವಿದ್ಯಮಾನ ಕುರಿತಂತೆ ಅವರೊಂದಿಗೆ ಸುಮಾರು 40 ನಿಮಿಷ ಚರ್ಚೆ ನಡೆಸಿದರು.

ಮೋದಿ ಅವರ ಈ ಭೇಟಿಗೂ ಮುನ್ನವೇ, ಪಕ್ಷದ ಪ್ರಧಾನ ಕಾರ್ಯದರ್ಶಿ ಅನಂತ್ ಕುಮಾರ್ ಅವರೂ ಕೂಡ ಅಡ್ವಾಣಿ ಅವರನ್ನು ಭೇಟಿ ಮಾಡಿದ್ದರು.

ತಮ್ಮ ಮುಂದಿನ ನಡೆಯನ್ನು ನಿರ್ಧರಿಸುವ ನಿಟ್ಟಿನಲ್ಲಿ ಅಡ್ವಾಣಿ ಅವರ ಸಲಹೆ ಅಗತ್ಯವೆಂದು ಅರಿತ ಮೋದಿ ಅವರು ಪಕ್ಷದ ಹಿರಿಯ ಮುಖಂಡನ ಮನೋಭಿಲಾಷೆ ಅರಿಯುವುದಕ್ಕಾಗಿ ಈ ಭೇಟಿ ನಡೆದಿದೆ ಎನ್ನಲಾಗಿದೆ.

ಈ ಹಿಂದೆ ಮೋದಿ ಅವರನ್ನು ಪಕ್ಷದ ಪ್ರಧಾನ ಮಂತ್ರಿ ಅಭ್ಯರ್ಥಿ ಎಂದು ಘೋಷಿಸುವ ವಿಚಾರದಲ್ಲಿ ಮುನಿಸಿಕೊಂಡಿದ್ದ ಅಡ್ವಾಣಿ ಅವ   ಪಕ್ಷದಲ್ಲಿ ತಾವು ಹೊಂದಿದ್ದ ಎಲ್ಲ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದರು. ಇದಾದ ಒಂದೇ ದಿನದ ನಂತರ ತಮ್ಮ ನಿರ್ಧಾರವನ್ನು ಬದಲಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT