ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶುಶ್ರೂಷಕಿಯರಿಗೆ ಪ್ರತ್ಯೇಕ ನಿರ್ದೇಶನಾಲಯ ಯತ್ನ: ಮೋಟಮ್ಮ ಭರವಸೆ

Last Updated 13 ಮೇ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: `ಶುಶ್ರೂಷಕಿಯರಿಗೆ ಪ್ರತ್ಯೇಕ ನಿರ್ದೇಶನಾಲಯ ರಚಿಸುವುದರ ಬಗ್ಗೆ ವಿಧಾನಪರಿಷತ್ ಅಧಿವೇಶನದಲ್ಲಿ ಚರ್ಚೆ ನಡೆಸಿ, ಸರ್ಕಾರದ ಗಮನ ಸೆಳೆಯಲಾಗುವುದು~ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕಿ ಮೋಟಮ್ಮ ಭರವಸೆ ನೀಡಿದರು.

ಫ್ಲಾರೆನ್ಸ್ ನೈಟಿಂಗೇಲ್ ನರ್ಸಸ್ ವೆಲ್‌ಫೇರ್ ಅಸೋಸಿಯೇಷನ್ ನಗರದಲ್ಲಿ ಶನಿವಾರ ಆಯೋಜಿಸಿದ್ದ ಅಂತರರಾಷ್ಟ್ರೀಯ ಶುಶ್ರೂಷಕಿ ದಿನಾಚರಣೆ ಮತ್ತು ನೈಟಿಂಗೇಲ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.

`ಶುಶ್ರೂಷಕಿಯರಿಗೆ ವೇತನ ಸೇರಿದಂತೆ ಹಲವು ಸಮಸ್ಯೆಗಳಿವೆ. ಪ್ರತಿ ಬಾರಿಯು ಅವರು ಈ ಸಮಸ್ಯೆಗಳ ವಿರುದ್ದ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಪರಿಹಾರ ಮಾತ್ರ ಶೂನ್ಯ. ಈ ಬಗ್ಗೆ ಸರ್ಕಾರ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು~ ಎಂದು ಆಗ್ರಹಿಸಿದರು.

`ವೈದ್ಯಕೀಯ ಕ್ಷೇತ್ರದಲ್ಲಿ ಅಗತ್ಯವಾಗಿ ಇರಬೇಕಾದ ಶುಶ್ರೂಷಕಿಯರು ಸಮರ್ಪಣ ಭಾವದಿಂದ ಮತ್ತು ಕಾಳಜಿಯಿಂದ ಸೇವೆ ಮಾಡಬೇಕು. ವಿಧಾನ ಪರಿಷತ್‌ನಲ್ಲಿ ಶುಶ್ರೂಷಕ ವೃತ್ತಿಗೆ  ಮೀಸಲಾತಿ ನೀಡಬೇಕು. ಈ ಬಗ್ಗೆ ಶಿಫಾರಸು ಮಾಡುತ್ತೇನೆ~ ಎಂದು ಹೇಳಿದರು.

`ಆಧುನಿಕ ಜೀವನ ಶೈಲಿಗೆ ಹೆಚ್ಚುತ್ತಿರುವ ರೋಗಿಗಳನ್ನು ನಿರ್ವಹಿಸುವುದು ಮಾತ್ರವಲ್ಲದೇ ದೇವರ ಸ್ವರೂಪದಲ್ಲಿ ಸ್ವಾಂತನ ಹೇಳುತ್ತಾರೆ. ಇಂತಹ ಮಾನವೀಯ ನೆಲೆಗಟ್ಟಿನಲ್ಲಿ ಕಾರ್ಯನಿರ್ವಹಿಸುವ ಕ್ಷೇತ್ರ ಬೇರೆ ಇಲ್ಲ. ಈ ವೃತ್ತಿಯ ಬದ್ದತೆಯನ್ನು ಅರಿತು ಯುವ ಶುಶ್ರೂಷಕಿಯರು ಕಾರ್ಯನಿರ್ವಹಿಸಬೇಕು~ ಎಂದು ಸಲಹೆ ನೀಡಿದರು.

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಕುಲಪತಿ ಶ್ರೀಪ್ರಕಾಶ್ ಮಾತನಾಡಿ, `ಜಾಗತಿಕ ಮಟ್ಟದಲ್ಲಿ ನರ್ಸಿಂಗ್ ಕ್ಷೇತ್ರಕ್ಕೆ ತೀವ್ರ ಬೇಡಿಕೆಯಿದ್ದು, ವಿಪುಲ ಉದ್ಯೋಗಾವಕಾಶಗಳಿವೆ. ಇದನ್ನು ಉತ್ತಮ ರೀತಿಯಲ್ಲಿ ಬಳಸಿಕೊಳ್ಳಬೇಕು~ ಎಂದು ಕಿವಿಮಾತು ಹೇಳಿದರು.

`ವೈದ್ಯಕೀಯ ಕ್ಷೇತ್ರದಲ್ಲಿ ವಿವಿಧ ರೀತಿಯ ನೂತನ ತಂತ್ರಜ್ಞಾನಗಳು ಅವಿಷ್ಕಾರಗೊಂಡಿವೆ. ಹೊರ ರಾಜ್ಯದವರು ಹೆಚ್ಚಿನ ಸಂಖ್ಯೆಯಲ್ಲಿ ನರ್ಸಿಂಗ್ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಆದರೆ ಇದರಲ್ಲಿ ಕನ್ನಡಿಗರ ಸಂಖ್ಯೆ ಮಾತ್ರ ತೀರಾ ಕಡಿಮೆಯಿದೆ~ ಎಂದು ಹೇಳಿದರು.

ಬೆಂಗಳೂರು ವೈದ್ಯಕೀಯ ಕಾಲೇಜಿನ ನಿರ್ದೇಶಕ ಡಾ.ಓ.ಎಸ್.ಸಿದ್ದಪ್ಪ, ಕರ್ನಾಟಕ ಶುಶ್ರೂಷಕ ಸಮಿತಿ ರಿಜಿಸ್ಟ್ರಾರ್ ಬಿ.ಎನ್.ಮುನಿನಾರಾಯಣಪ್ಪ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಡಾ.ಬಿ.ಸಿ.ಭಗವಾನ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT