ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೇ9ರಷ್ಟು ಜಿಡಿಪಿ ಗುರಿ

Last Updated 17 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಜಾಗತಿಕ ಆರ್ಥಿಕ ಅಸ್ಥಿರತೆ ಮತ್ತು ಹಣದುಬ್ಬರ ಏರಿಕೆಯಿಂದ ಸೃಷ್ಟಿಯಾಗಿರುವ ಆತಂಕಗಳನ್ನು  ಅಲ್ಲಗಳೆದಿರುವ ಕೇಂದ್ರ ಹಣಕಾಸು ಸಚಿವ ಪ್ರಣವ್ ಮುಖರ್ಜಿ, ದೇಶವು ಅಲ್ಪಾವಧಿ ಮತ್ತು ದೀರ್ಘಾವಧಿಯಲ್ಲಿ  ಶೇ 8.5 ರಿಂದ ಶೇ 9ರಷ್ಟು ಆರ್ಥಿಕ ವೃದ್ಧಿ ದರ (ಜಿಡಿಪಿ) ಕಾಯ್ದುಕೊಳ್ಳಲಿದೆ ಎಂದು ಹೇಳಿದ್ದಾರೆ.

ಸೋಮವಾರ ಇಲ್ಲಿ `ಏಷ್ಯಾ ಅಭಿವೃದ್ಧಿ ಬ್ಯಾಂಕ್ (ಎಡಿಬಿ) ಮತ್ತು ಭಾರತದ ನಡುವಿನ ಪಾಲುದಾರಿಕೆಯ ಬೆಳ್ಳಿ ಮಹೋತ್ಸವ ಸಮಾರಂಭ ಉದ್ಘಾಟಿಸಿ  ಅವರು ಮಾತನಾಡುತ್ತಿದ್ದರು. ದೇಶದ ಆರ್ಥಿಕ ವೃದ್ಧಿ ದರ ತ್ವರಿತವಾಗಿ ಬೆಳೆಯುತ್ತಿದ್ದು,  ಶೇ 8.5ರಿಂದ ಶೇ 9ರಷ್ಟು ಸರಾಸರಿ ಗುರಿ ಕಾಯ್ದುಕೊಳ್ಳಲಿದೆ.
 
ಆದರೆ, ಸದ್ಯ ಪ್ರವರ್ಧಮಾನಕ್ಕೆ ಬರುತ್ತಿರುವ ಹೊಸ ಸಮಸ್ಯೆಗಳು ಮತ್ತು ಸವಾಲುಗಳ ಕುರಿತು ಹೆಚ್ಚಿನ ಮುನ್ನೆಚ್ಚರಿಕೆ ವಹಿಸಬೇಕಿದೆ ಎಂದರು.`ಇತರ ದೇಶಗಳಂತೆ ಅಗತ್ಯ ಸರಕುಗಳ ಬೆಲೆ ಏರಿಕೆ ಮತ್ತು ಆಹಾರ ಭದ್ರತೆಗೆ ಸಂಬಂಧಿಸಿದ ಸಮಸ್ಯೆಗಳು ದೇಶದಲ್ಲಿಯೂ ಇವೆ.

ಸುಸ್ಥಿರ ಪ್ರಗತಿ ಆಧಾರದಲ್ಲಿ ಕೃಷಿ ಉತ್ಪಾದನೆಯನ್ನು ಹೆಚ್ಚಿಸುವ ಮೂಲಕ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು ಎಂದರು.
 
12ನೇ ಪಂಚವಾರ್ಷಿಕ ಯೋಜನೆ ಅವಧಿಯಲ್ಲಿ ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳಿಗಾಗಿ  ಒಟ್ಟು   ರೂ1 ಲಕ್ಷ ಕೋಟಿ ಹೂಡಿಕೆ ಮಾಡಲಾಗುವುದು. ಖಾಸಗಿ-ಸರ್ಕಾರಿ ಸಹಭಾಗಿತ್ವದಲ್ಲಿ ಮೂಲಸೌಕರ್ಯ ವೃದ್ಧಿ ಯೋಜನೆಗಳನ್ನು ಕೈಗೆತ್ತಿಕೊಳ್ಳಲು `ಎಡಿಬಿ~ ನೆರವು ನೀಡಲಿದೆ  ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT