ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೈಕ್ಷಣಿಕ ಜಾಗೃತಿಗೆ ಸ್ವಾಮೀಜಿ ಪಾದಯಾತ್ರೆ

Last Updated 21 ಜೂನ್ 2011, 19:25 IST
ಅಕ್ಷರ ಗಾತ್ರ

ಚಿತ್ರದುರ್ಗ: ಹೊಳಲ್ಕೆರೆ ತಾಲ್ಲೂಕು ನಾರಾಯಣಗೊಂಡನಹಳ್ಳಿಯ ದಲಿತ ಕಾಲೊನಿಯಲ್ಲಿ ಮಂಗಳವಾರ  ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಶೈಕ್ಷಣಿಕ ಜಾಗೃತಿ ಪಾದಯಾತ್ರೆ ನಡೆಸಿದರು.

ಶಿವಶರಣ ಮಾದಾರ ಚನ್ನಯ್ಯ ಗುರುಪೀಠ ಹಾಗೂ ಇನ್ನರ್‌ವ್ಹೀಲ್ ಕ್ಲಬ್ ಸಹಯೋಗದಲ್ಲಿ ಪಾದಯಾತ್ರೆ ಆಯೋಜಿಸಲಾಗಿತ್ತು.

ಇಲ್ಲಿನ ಸರ್ಕಾರಿ ಶಾಲೆಗೆ ಭೇಟಿ ನೀಡಿದ ಸ್ವಾಮೀಜಿ, ಶಾಲೆ ಬಿಟ್ಟಿರುವ ದಲಿತರ ಮಕ್ಕಳ ವಿವರಗಳನ್ನು ಪಡೆದು ಮನೆಗಳಿಗೆ ಭೇಟಿ ನೀಡಿ ಶಾಲೆಗೆ ಮಕ್ಕಳನ್ನು ಕಳುಹಿಸುವಂತೆ ಪೋಷಕರ ಮನವೊಲಿಸಿದರು. 

ಗ್ರಾಮದಲ್ಲಿ ಸುಮಾರು 160 ದಲಿತ ಕುಟುಂಬಗಳು ವಾಸಿಸುತ್ತಿದ್ದು, ಅವರಿಗೆ ಉಳುಮೆಗೆ ಭೂಮಿ ಇಲ್ಲ ಹಾಗೂ ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸುವ ಕಾಳಜಿ ಇಲ್ಲ ಎಂಬುದನ್ನು ತಿಳಿದುಕೊಂಡ ಸ್ವಾಮೀಜಿ ಪೋಷಕರ ಮನವೊಲಿಸಲು ಗ್ರಾಮಕ್ಕೆ ಆಗಮಿಸಿದ್ದರು.

ಮಕ್ಕಳಿಗೆ ಶಿಕ್ಷಣ ಕೊಡಿಸದಿದ್ದರೆ ದಲಿತರ ಅಭಿವೃದ್ಧಿ ಅಸಾಧ್ಯ. ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಿ ವಿದ್ಯಾವಂತರಾಗಿ ಮಾಡಬೇಕು ಎಂದು ಸಲಹೆ ನೀಡಿದರು.

ಮಕ್ಕಳನ್ನು ಶಾಲೆಗೆ ಕಳುಹಿಸುತ್ತೇವೆ ಎಂದು ಪೋಷಕರು ಸ್ವಾಮೀಜಿಗೆ ವಾಗ್ದಾನ ಮಾಡಿದರು.
ಶೋಷಿತರ ಸಮುದಾಯಗಳಲ್ಲಿರುವ ಶಿಕ್ಷಣದ ಬಗ್ಗೆ ಅಸಡ್ಡೆ ತೊಲಗಿಸಲು ರಾಜ್ಯದ ವಿವಿಧೆಡೆ ಶೈಕ್ಷಣಿಕ ಜಾಗೃತಿ ಪಾದಯಾತ್ರೆ ನಡೆಸಲಾಗುವುದು ಎಂದರು.

ಇದೇ ಸಂದರ್ಭದಲ್ಲಿ 180 ಮಕ್ಕಳಿಗೆ ಶಿವಶರಣ ಮಾದಾರ ಚನ್ನಯ್ಯ ಗುರುಪೀಠದ ವತಿಯಿಂದ ಸಮವಸ್ತ್ರ ಹಾಗೂ ಕಲಿಕಾ ಸಾಮಗ್ರಿಗಳನ್ನು ವಿತರಿಸಲಾಯಿತು.

ಇನ್ನರ್‌ವ್ಹೀಲ್ ಕ್ಲಬ್ ಅಧ್ಯಕ್ಷೆ ಸೌಮ್ಯಾ ರವಿಶಂಕರ್, ಸದಸ್ಯರಾದ ರೂಪಾ ಜನಾರ್ದನ್, ಭಾಗ್ಯ, ಫರ್ನಾಜ್ ಇಸಾಕ್, ಶೀಲಾ ನರೇಂದ್ರ, ಯುವ ಕಾಂಗ್ರೆಸ್ ಮುಖಂಡ ಪಾಡಿಗಟ್ಟೆ ಸುರೇಶ್, ಗ್ರಾಮ ಪಂಚಾಯ್ತಿ ಸದಸ್ಯ ರಂಗಪ್ಪ, ವರ್ತಕ ರವಿಶಂಕರ್ ಇತರರು ಹಾಜರಿದ್ದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT