ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೌಚಾಲಯ ನಿರ್ಮಾಣಕ್ಕೆ ಸಹಾಯಧನ: ಪ್ರಸ್ತಾವನೆ

Last Updated 3 ಅಕ್ಟೋಬರ್ 2011, 6:00 IST
ಅಕ್ಷರ ಗಾತ್ರ

ಬಾಗಲಕೋಟೆ: ರಾಜ್ಯದಲ್ಲಿ ವಯಕ್ತಿಕ ಶೌಚಾ ಲಯ ನಿರ್ಮಿಸಿಕೊಳ್ಳಲು ಮುಂದೆ ಬರುವ ಬಿಪಿಎಲ್, ಎಪಿಎಲ್ ಸೇರಿದಂತೆ ಎಲ್ಲ ವರ್ಗದ ವರಿಗೂ ಸಹಾಯಧನ ನೀಡಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸಚಿವ ಜಗದೀಶ ಶೆಟ್ಟರ ಹೇಳಿದರು.

ಸಂಪೂರ್ಣ ಸ್ವಚ್ಛತಾ ಆಂದೋಲನದಡಿ ಸ್ವಚ್ಛತಾ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಬಯಲು ಮಲ ವಿಸರ್ಜನೆ ತಡೆಯುವ ಉದ್ದೇಶದಿಂದ ಜಾರಿಗೊಳಿಸಿದ ಸಂಪೂರ್ಣ ಸ್ವಚ್ಛತಾ ಆಂದೋಲನದಡಿ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಮಾತ್ರ ಈ ವರೆಗೆ ಸಹಾಯಧನ ನೀಡಲಾಗುತ್ತಿತ್ತು.

ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದ್ದು ಬಿಪಿಎಲ್, ಎಪಿಎಲ್ ಸೇರಿದಂತೆ ಎಲ್ಲ ವರ್ಗದ ಜನರಿಗೂ ಶೌಚಾಲಯ ನಿರ್ಮಿಸಿಕೊಳ್ಳಲು ಸಹಾಯಧನ ನೀಡಲು ಸಾಧ್ಯವಾಗಬಹುದು ಎಂದರು.

ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ರೂ. 2200, ರಾಜ್ಯ ಸರ್ಕಾರ 1500 ಸೇರಿದಂತೆ ಒಟ್ಟು ರೂ. 3700 ಸಹಾಯಧನ ನೀಡಲಾಗುತ್ತಿದೆ. ಇದರ ಜೊತೆಗೆ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಶೌಚಾಲಯ ನಿರ್ಮಾಣಕ್ಕೆ 21 ದಿನದ ಕೂಲಿ ಕೆಲಸಕ್ಕೆ ರೂ. 2350 ಅನುದಾನ ನೀಡಲಾಗುವುದು.

ಒಂದು ಶೌಚಾಲಯ ನಿರ್ಮಾಣಕ್ಕೆ ಒಟ್ಟು 6 ಸಾವಿರ ಸಹಾ ಯಧನ ದೊರೆಯುತ್ತದೆ. ಆದ್ದರಿಂದ ಪ್ರತಿ ಯೊಬ್ಬರು ವೈಯಕ್ತಿಕ ಶೌಚಾಲಯ ನಿರ್ಮಾಣ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ರಾಜ್ಯದಲ್ಲಿ 2005ರಿಂದ ಸಂಪೂರ್ಣ ಸ್ವಚ್ಛತಾ ಆಂದೋಲನ ಯೋಜನೆ ಜಾರಿಗೊಳಿಸಲಾಗಿದೆ. ಮೊದಲಿಗೆ ಕೇವಲ ರೂ. 500 ಸಹಾಯಧನ ನೀಡ ಲಾಗುತ್ತಿತ್ತು. ಈಗ ರೂ. 3700 ಸಹಾಯಧನ ನೀಡಲಾಗುತ್ತಿದೆ. ಉಡುಪಿ, ಮಂಗಳೂರು, ಕೊಡಗು ಸೇರಿದಂತೆ ದಕ್ಷಿಣ ಕರ್ನಾಟಕದಲ್ಲಿ ಯೋಜನೆ ಯಶಸ್ವಿಯಾಗಿದೆ.

ಆದರೆ ಉತ್ತರ ಕರ್ನಾಟಕದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಸಾಧನೆ ಯಾಗಿಲ್ಲ. ಆದ್ದರಿಂದ ಗ್ರಾಮೀಣ ಜನರಿಗೆ ಯೋಜ ನೆಯ ಉದ್ದೇಶ, ಬಯಲು ಶೌಚ್ಛದಿಂದಾಗುವ ಹಾನಿ, ಶೌಚಾಲಯ ಬಳಕೆಯಿಂದ ಆಗುವ ಆರೋಗ್ಯಕರ ವಾತಾವರಣ ಕುರಿತು ಜಾಗತಿ ಮೂಡಿಸಲು ರಾಜ್ಯಾದ್ಯಂತ ಸ್ವಚ್ಛತಾ ಉತ್ಸವ ಹಮ್ಮಿಕೊಳ್ಳಲಾಗಿದೆ. ಈ ಉತ್ಸವ ನವೆಂಬರ್ 4ರ ವೆರೆಗೆ ಪ್ರತಿ ಗ್ರಾಮ ಪಂಚಾಯಿತಿಯಲ್ಲೂ ನಡೆಯಲಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ 58 ಲಕ್ಷ ಶೌಚಾಲಯ ನಿರ್ಮಾ ಣದ ಗುರಿ ಹೊಂದಲಾಗಿತ್ತು. ಆದರೆ ಈ ವರೆಗೆ ಕೇವಲ 39 ಲಕ್ಷ ಶೌಚಾಲಯ ನಿರ್ಮಾಣ ಮಾಡ ಲಾಗಿದೆ. ಅಂಗನವಾಡಿ ಮತ್ತು ಶಾಲಾ ಶೌಚಾ ಲಯ ನಿರ್ಮಾಣದಲ್ಲಿ ಶೇ.100ಕ್ಕೆ 100ರಷ್ಟು ಸಾಧನೆಯಾಗಿದೆ.

ಆದರೆ ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕೆ ಜನರು ಮುಂದೆ ಬರುತ್ತಿಲ್ಲ. ಮಹಿಳೆಯರ ಗೌರವಕ್ಕೆ ಕುಂದು ತರುವ ಬಯಲು ಶೌಚ್ಛ ಬಿಟ್ಟು ವೈಯಕ್ತಿಕ ಶೌಚಾಲಯ ನಿರ್ಮಿ ಸಿಕೊಳ್ಳಬೇಕು ಎಂದರು.

ಗ್ರಾಮೀಣ ಜನರು ಶೌಚಾಲಯ ನಿರ್ಮಾಣಕ್ಕೆ ಜಾಗದ ಕೊರತೆ ಇದ್ದಲ್ಲಿ ಗ್ರಾಮದ ಸರ್ಕಾರಿ ಜಾಗೆ ಯಲ್ಲಾದರೂ ನಿರ್ಮಿಸಿಕೊಳ್ಳಿ. ಇದಕ್ಕೆ ಪೂರಕ ವ್ಯವಸ್ಥೆ ಮಾಡಲಾಗುವುದು ಎಂದರು.

ಶುದ್ಧ ನೀರು, ಸ್ವಚ್ಛ ಪರಿಸರ ಆಗಬೇಕು. ಇದು ಗ್ರಾಮೀಣಾಭಿವದ್ಧಿಯ ಸಂಕೇತ. ಇದಕ್ಕಾಗಿ ಇಲಾಖೆಯಿಂದ ಸಾಕಷ್ಟು ಕೆಲಸ ಮಾಡ ಲಾಗುತ್ತಿದೆ. ಜನರ ಹಾಗೂ ಗ್ರಾಮ ಮಟ್ಟದ ಜನಪ್ರತಿನಿಧಿಗಳ ಸಹಕಾರವೂ ಬೇಕು ಎಂದು ತಿಳಿಸಿದರು.

ರಾಜ್ಯದಲ್ಲಿ ಗ್ರಾಮೀಣ ಅಭಿವದ್ಧಿ ಮತ್ತು ಪಂಚಾಯಿತಿ ರಾಜ್ ಇಲಾಖೆಯಿಂದ ನಡೆಯುವ ಕಾರ್ಯಕ್ರಮಗಳಲ್ಲಿ ಅತಿಥಿಗಳಿಗೆ ಹೂವಿನ ಹಾರ ಹಾಕುವ ಬದಲು ಪುಸ್ತಕ ನೀಡಲು ಆದೇಶ ಹೊರ ಡಿಸಲಾಗಿದೆ. ಇನ್ನು ಮುಂದೆ ಎಲ್ಲ ಕಾರ್ಯ ಕ್ರಮಗಳಲ್ಲಿ ಇದು ಕಡ್ಡಾಯ ಎಂದು ಸಚಿವ ಶೆಟ್ಟರ ತಿಳಿಸಿದರು.

ಸಚಿವ ಗೋವಿಂದ ಕಾರಜೋಳ, ಸಂಸದ ಪಿ.ಸಿ. ಗದ್ದಿಗೌಡರ, ಶಾಸಕರಾದ ವೀರಣ್ಣ ಚರಂತಿಮಠ, ಎಸ್.ಆರ್. ಪಾಟೀಲ, ನಾರಾಯಣಸಾ ಬಾಂಡಗೆ, ಅರುಣ ಶಹಾಪುರ, ಜಿ.ಪಂ. ಅಧ್ಯಕ್ಷೆ ಕವಿತಾ ದಡ್ಡೇನವರ, ಉಪಾಧ್ಯಕ್ಷ ಹೂವಪ್ಪ ರಾಠೋಡ, ಜಿಲ್ಲಾಧಿಕಾರಿ ಎ.ಎಂ. ಕುಂಜಪ್ಪ, ಸಿಇಒ ಡಾ.ಜೆ.ಸಿ. ಪ್ರಕಾಶ ಮುಂತಾದವರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT