ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರದ್ಧೆಯಿಂದ ಕಲಿತರೆ ಉನ್ನತ ಅವಕಾಶ

Last Updated 6 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ನಾಗಮಂಗಲ: ~ವಿದ್ಯಾರ್ಥಿಗಳು ಆಸಕ್ತಿ ಮತ್ತು ಶ್ರದ್ಧೆಯಿಂದ ಕಲಿಕೆಯಲ್ಲಿ ತೊಡಗಿಸಿಕೊಂಡರೆ ಭವಿಷ್ಯದಲ್ಲಿ ಉತ್ತಮ ಜೀವನ ನಡೆಸಬಹುದು~ ಎಂದು ವಿಶ್ವೇಶ್ವರಯ್ಯ ತಾಂತ್ರಿಕ ಮಹಾ ವಿದ್ಯಾಲಯದ ಮಾಜಿ ಕುಲಪತಿ ಡಾ. ಕೆ.ಬಲವೀರ ರೆಡ್ಡಿ ಸಲಹೆ ನೀಡಿದರು.

ತಾಲ್ಲೂಕಿನ ಬಿಜಿ ನಗರದ ಬಾಲಗಂಗಾಧರನಾಥ ಸ್ವಾಮೀಜಿ ತಾಂತ್ರಿಕ ಶಿಕ್ಷಣ ವಿದ್ಯಾಲಯದಲ್ಲಿ ಮಂಗಳವಾರ ಏರ್ಪಡಿಸಿದ್ದ ಸಮಾರಂಭ ಉದ್ಘಾಟಿಸಿ ಮಾತನಾಡಿದರು.ನಾಲ್ಕು ವರ್ಷದ ಎಂಜಿನಿಯರಿಂಗ್ ಶಿಕ್ಷಣವನ್ನು ಶ್ರದ್ಧೆಯಿಂದ ಪೂರೈಸಿದರೆ ನಲವತ್ತು ವರ್ಷ ನೆಮ್ಮದಿಯ ಜೀವನ ನಡೆಸಬಹುದು ಎಂದರು.

ವಿದ್ಯಾರ್ಥಿಗಳು ಕಾಲೇಜಿನಲ್ಲಿ ಲಭ್ಯವಿರುವ ಗ್ರಂಥಾಲಯ, ಇಂಟರ್‌ನೆಟ್ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಬೌದ್ಧಿಕ ಜ್ಞಾನ ಹೆಚ್ಚಿಸಿಕೊಳ್ಳಬೇಕು ಎಂದರು.ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದ ಮಾಜಿ ಕುಲಪತಿ ಡಾ. ಎನ್.ಎಸ್.ರಾಮೇಗೌಡ ಅವರು, ~ಸ್ಪಷ್ಟ ಗುರಿ ಇರಿಸಿಕೊಂಡು ಅಧ್ಯಯನದಲ್ಲಿ ತೊಡಗಿಸಿಕೊಂಡರೆ ಯಶಸ್ಸು ಸಾಧಿಸಬಹುದು. ಗುರಿ ಮುಟ್ಟುವವರೆಗೂ ಏಕಾಗ್ರತೆ ಕಳೆದುಕೊಳ್ಳಬಾರದು~ ಎಂದು ಹೇಳಿದರು.

ಆದಿಚುಂಚನಗಿರಿ ಮಠದ ಆಡಳಿತಾಧಿಕಾರಿ ಜೆ.ಎನ್.ರಾಮಕೃಷ್ಣೇಗೌಡ, ಪ್ರಾಚಾರ್ಯ ಡಾ. ಬಿ.ಕೆ. ನರೇಂದ್ರ, ಪ್ರೊ. ಎಂ.ಬಿ.ಆನಂದರಾಜು, ಪ್ರೊ. ಎಂ.ರಾಜರಾಂ, ಪ್ರೊ. ಎಲ್.ರಂಗನಾಥಸ್ವಾಮಿ, ಡಾ. ಎಂ.ಜಿ.ಶಿವರಾಮು, ಡಾ. ಬಿ.ರಮೇಶ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT