ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀರಂಗಪಟ್ಟಣ ದಸರಾ-ಲಾಂಛನ ಬಿಡುಗಡೆ

Last Updated 22 ಸೆಪ್ಟೆಂಬರ್ 2011, 19:40 IST
ಅಕ್ಷರ ಗಾತ್ರ

ಬೆಂಗಳೂರು: ವಿಜಯನಗರದ ಸಾಮಂತ ಶ್ರೀರಂಗರಾಯನಿಂದ 1610ರಲ್ಲಿ ರಾಜ ಒಡೆಯರ್ ಪೂರ್ಣ ಸಿಂಹಾಸನವನ್ನು ವಶಪಡಿಸಿಕೊಂಡ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣ ದಸರಾ ಮಹೋತ್ಸವವನ್ನು ಈ ವರ್ಷವೂ ಆಚರಿಸಲಾಗುತ್ತಿದೆ.

ಇದೇ 30ರಿಂದ ಅಕ್ಟೋಬರ್ 4ರವರೆಗೆ ದಸರಾ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲಾಡಳಿತ ಸಿದ್ಧಪಡಿಸಿರುವ ಶ್ರೀರಂಗಪಟ್ಟಣ ದಸರಾ ಮಹೋತ್ಸವದ ಲಾಂಛನವನ್ನು ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕೆ.ಜೈರಾಜ್ ಗುರುವಾರ ವಿಧಾನಸೌಧದಲ್ಲಿ ಬಿಡುಗಡೆ ಮಾಡಿದರು.

ಲಾಂಛನ ಬಿಡುಗಡೆ ಸಂದರ್ಭದಲ್ಲಿ ಶ್ರೀರಂಗಪಟ್ಟಣ ಶಾಸಕ ರಮೇಶ್ ಬಂಡಿಸಿದ್ದೇಗೌಡ, ವಿಧಾನ ಪರಿಷತ್ ಸದಸ್ಯ ಅಶ್ವತ್ಥನಾರಾಯಣ, ಮಂಡ್ಯ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯೂ ಆದ ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಎಂ.ಕೆ.ಶಂಕರಲಿಂಗೇಗೌಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಬಸವರಾಜು, ಮಂಡ್ಯ ಜಿಲ್ಲಾಧಿಕಾರಿ ಡಾ.ಪಿ.ಸಿ.ಜಾಫರ್ ಇತರರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT