ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀಲಂಕಾ ಸಚಿವರಿಗೆ ಕರೆ ಮಾಡಿದ ಕೃಷ್ಣ

Last Updated 17 ಫೆಬ್ರುವರಿ 2011, 18:10 IST
ಅಕ್ಷರ ಗಾತ್ರ

ನವದೆಹಲಿ (ಐಎಎನ್‌ಎಸ್): ಬಂಧಿತರಾಗಿರುವ ಭಾರತೀಯ ಮೀನುಗಾರರ ಬಿಡುಗಡೆಗೆ ಶ್ರೀಲಂಕಾ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತದೆ ಎನ್ನುವ ವಿಶ್ವಾಸವನ್ನು ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಎಂ.ಕೃಷ್ಣ ವ್ಯಕ್ತಪಡಿಸಿದ್ದಾರೆ.

ಗುರುವಾರ ಶ್ರೀಲಂಕಾದ ತಮ್ಮ ಸಹವರ್ತಿ ಜಿ.ಎಲ್.ಪೆರಿಸ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ಕೃಷ್ಣ, ಬಂಧಿತ ಭಾರತೀಯ ಮೀನುಗಾರರ ಬಿಡುಗಡೆಗೆ ಶ್ರೀಲಂಕಾ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತದೆ ಎನ್ನುವ ವಿಶ್ವಾಸ ಹೊಂದಿರುವುದಾಗಿ ತಿಳಿಸಿದರು.

ಸಮಸ್ಯೆಯನ್ನು ಎರಡೂ ಸರ್ಕಾರಗಳು ಸೌಹಾರ್ದಯುತವಾಗಿ ಬಗೆ ಹರಿಸಿಕೊಳ್ಳುವ ಅನಿವಾರ್ಯತೆ ಇದೆ ಎಂದು ನಂತರ ಅವರು ಸುದ್ದಿಗಾರರಿಗೆ ತಿಳಿಸಿದರು.
ಕಳೆದ ಕೆಲವು ದಿನಗಳಿಂದ ಶ್ರೀಲಂಕಾದ ನೌಕಾಪಡೆ ‘ಅಕ್ರಮ ಮೀನುಗಾರಿಕೆ’ ಆರೋಪದ ಮೇಲೆ 142 ಭಾರತೀಯ ಮೀನುಗಾರರನ್ನು ಬಂಧಿಸಿದೆ. ಶ್ರೀಲಂಕಾದ ಈ ಕ್ರಮಕ್ಕೆ ತಮಿಳುನಾಡಿನಲ್ಲಿ ಭಾರಿ ವಿರೋಧ ವ್ಯಕ್ತವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT