ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀಶೈಲ ಸ್ವಾಮೀಜಿ ಅಂತ್ಯಕ್ರಿಯೆ

Last Updated 30 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ದಾವಣಗೆರೆ: ಪಂಚಪೀಠಗಳಲ್ಲಿ ಒಂದಾದ ಶ್ರೀಶೈಲ ಪೀಠದ ಹಿರಿಯ ಜಗದ್ಗುರು ಉಮಾಪತಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಅವರ ಅಂತ್ಯಕ್ರಿಯೆ ಭಾನುವಾರ ನಗರದ ಪಂಚಾಚಾರ್ಯ ಮಠದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ, ಅಪಾರ ಭಕ್ತರ ಸಮ್ಮುಖದಲ್ಲಿ ನರವೇರಿತು.

ಕ್ರಿಯಾ ಸಮಾಧಿ ಪೂಜಾ ವಿಧಿ-ವಿಧಾನದ ಮೂಲಕ ಅಂತ್ಯಕ್ರಿಯೆ ಮಧ್ಯಾಹ್ನ 2.30ಕ್ಕೆ ನಡೆಯಿತು. ಇದಕ್ಕೂ ಮೊದಲು ಬೆಳಿಗ್ಗೆ 8.30ರಿಂದ ಶ್ರೀಶೈಲ ಮಠದಿಂದ ಸ್ವಾಮೀಜಿ ಅವರ ಪಾರ್ಥಿವ ಶರೀರವನ್ನು ಗಾಂಧಿ ವೃತ್ತದ ಮಾರ್ಗವಾಗಿ  ಮೆರವಣಿಗೆ ಮೂಲಕ ತರಲಾಯಿತು.

 ಮೆರವಣಿಗೆಯಲ್ಲಿ ಸಚಿವರಾದ ಉಮೇಶ್ ಕತ್ತಿ, ಸಿ.ಎಂ.ಉದಾಸಿ, ಎಂ.ಪಿ. ರೇಣುಕಾಚಾರ್ಯ, ಸಂಸತ್ ಸದಸ್ಯರಾದ ಜಿ.ಎಂ. ಸಿದ್ದೇಶ್ವರ, ಬಿ.ವೈ. ರಾಘವೇಂದ್ರ, ಶಾಸಕರಾದ ಶಾಮನೂರು ಶಿವಶಂಕರಪ್ಪ, ಬಿ.ಪಿ. ಹರೀಶ್, ವಿಧಾನ ಪರಿಷತ್ ಮುಖ್ಯ ಸಚೇತಕ ಎ.ಎಚ್. ಶಿವಯೋಗಿಸ್ವಾಮಿ ಮತ್ತಿತರರು ಭಾಗವಹಿಸಿದ್ದರು.
 ಮೆರವಣಿಗೆಯ ನಂತರ ಜಿಲ್ಲಾ ಸಶಸ್ತ್ರ ಮೀಸಲು ಪಡೆಯಿಂದ ಮೂರು ಸುತ್ತು ಕುಶಾಲ ತೋಪು  ಹಾರಿಸುವ ಮೂಲಕ ಅಂತಿಮ ಗೌರವ ಸಲ್ಲಿಸಲಾಯಿತು.~

ರಾಜ್ಯ ವಿವಿಧ ಭಾಗಗಳಿಂದ ಹಾಗೂ ಆಂಧ್ರ ಮತ್ತು ಮಹಾರಾಷ್ಟ್ರಗಳಿಂದ ಬಂದ ಸಾವಿರಾರು ಭಕ್ತರು ಸ್ವಾಮೀಜಿ ಅವರ ಅಂತಿಮ ದರ್ಶನ ಪಡೆದರು. ರಂಭಾಪುರಿ ಪೀಠದ ವೀರಸೋಮೇಶ್ವರ ಸ್ವಾಮೀಜಿ ಸೇರಿದಂತೆ ದೇಶದ ನಾನಾ ಮಠಗಳ ಸುಮಾರು 350ರಿಂದ 400 ಸ್ವಾಮೀಜಿಗಳು ಆಗಮಿಸಿದ್ದರು. 

 ಸ್ವಾಮೀಜಿಯವರ ತಾಯಿ ಶಿವಲಿಂಗಮ್ಮ ಮತ್ತು ಕುಟುಂಬದ ಸದಸ್ಯರು ಭಾಗವಹಿಸಿದ್ದರು. ಜನಜಂಗುಳಿಯನ್ನು ನಿಯಂತ್ರಿಸಲು ಮಠದ ಹೊರಭಾಗದಲ್ಲಿ ಕುಳಿತುಕೊಳ್ಳಲು ಮತ್ತು ಅಂತ್ಯಸಂಸ್ಕಾರ ವೀಕ್ಷಿಸಲು ಟಿವಿ ವ್ಯವಸ್ಥೆ ಮಾಡಲಾಗಿತ್ತು.

 ಕಾಶೀ ಪೀಠದ ಡಾ.ಚಂದ್ರಶೇಖರ ಸ್ವಾಮೀಜಿ. ಶ್ರೀಶೈಲ ಪೀಠದ ಚನ್ನಸಿದ್ದರಾಮ ಶಿವಾಚಾರ್ಯ ಸ್ವಾಮೀಜಿ ಅಂತಿಮ ವಿಧಿವಿಧಾನ ಪೂರೈಸಿದ ನಂತರ ಮಠದೊಳಗೆ ನಿರ್ಮಿಸಿದ ಸುಸಜ್ಜಿತ ಗದ್ದುಗೆಯಲ್ಲಿ ಸ್ವಾಮೀಜಿ ಕಾಯ ಲೀನವಾಯಿತು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT