ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಷಾ ನಿಷೇಧ ತೆರವು: ‘ಸುಪ್ರೀಂ’ನಲ್ಲಿ ಪ್ರಶ್ನಿಸಲು ಅಜಂ ನಿರ್ಧಾರ

Last Updated 18 ಏಪ್ರಿಲ್ 2014, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಮಿತ್‌ ಷಾ ಅವರ ಮೇಲೆ ಚುನಾವಣಾ ಪ್ರಚಾರ ಮತ್ತು ಸಮಾವೇಶದಲ್ಲಿ ಭಾಗವಹಿಸದಂತೆ ಹೇರಿದ್ದ ನಿಷೇಧವನ್ನು ಚುನಾವಣಾ ಆಯೋಗ ವಾಪಸ್‌ ಪಡೆದಿರುವುದು ವಿವಾದಕ್ಕೆ ಕಾರಣವಾಗಿದೆ.

ಬಿಜೆಪಿಯ ಆಣತಿಯಂತೆ ಆಯೋಗ ಕೆಲಸ ಮಾಡುತ್ತಿದೆ ಎಂದು ಸಮಾಜವಾದಿ ಪಕ್ಷ (ಎಸ್‌ಪಿ) ಆರೋಪಿಸಿದೆ. ಆಯೋಗದ ನಿರ್ಧಾರದ ಬಗ್ಗೆ ಕಾಂಗ್ರೆಸ್‌ ಕೂಡ ಅತೃಪ್ತಿ ವ್ಯಕ್ತಪಡಿಸಿದೆ. ಅಮಿತ್‌ ಷಾ ಮತ್ತು ಆಯೋಗದಿಂದ ನಿಷೇಧಕ್ಕೆ ಒಳಗಾಗಿರುವ ಇನ್ನೊಬ್ಬ ನಾಯಕ ಎಸ್‌ಪಿಯ ಅಜಂ ಖಾನ್‌ ಅವರಿಬ್ಬರೂ ಒಂದೇ ಪ್ರಮಾಣದಲ್ಲಿ ಕೋಮುವಾದಿ­ಗಳಾಗಿದ್ದಾರೆ ಎಂದು ಕಾಂಗ್ರೆಸ್‌ ಹೇಳಿದೆ.

ಆಯೋಗದ ನಿರ್ಧಾರದಿಂದ ಅಜಂ ಖಾನ್‌ ಅವರು ಕುಪಿತ­ರಾಗಿದ್ದಾರೆ. ಉತ್ತರ ಪ್ರದೇಶದಲ್ಲಿ ಚುನಾವಣಾ ಪ್ರಚಾರ ನಡೆಸದಂತೆ ಆಯೋಗ ಹೇರಿರುವ ನಿಷೇಧವನ್ನು ಸುಪ್ರೀಂ ಕೋರ್ಟ್‌­ನಲ್ಲಿ ಪ್ರಶ್ನಿಸಲಾಗುವುದು ಎಂದು ಹೇಳಿದ್ದಾರೆ.

ಸೌಹಾರ್ದಕ್ಕೆ ಭಂಗ ಉಂಟಾಗುವ ರೀತಿಯಲ್ಲಿ ಮತ್ತು ಶಾಂತಿ, ಸುವ್ಯವಸ್ಥೆಗೆ ಹಾನಿಯಾಗುವ ರೀತಿಯಲ್ಲಿ ನಡೆದು­ಕೊಳ್ಳುವುದಿಲ್ಲ ಎಂದು ಅಮಿತ್‌ ಷಾ ಭರವಸೆ ನೀಡಿದ್ದರಿಂದಾಗಿ ಅವರ ಮೇಲೆ ಹೇರಲಾಗಿದ್ದ ನಿಷೇಧ­ವನ್ನು ಆಯೋಗ ಗುರು­ವಾರ ಹಿಂದಕ್ಕೆ ಪಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT