ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಕ್ಷಿಪ್ತ ಬೆಂಗಳೂರು ಸುದ್ದಿಗಳು

Last Updated 16 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಜಾರಕಿಹೊಳಿಗೆ ಹೆಚ್ಚುವರಿ ಹೊಣೆ
ಬೆಂಗಳೂರು:
ಪೌರಾಡಳಿತ ಸಚಿವ ಬಾಲಚಂದ್ರ ಜಾರಕಿಹೊಳಿ ಅವರಿಗೆ ಹೆಚ್ಚುವರಿಯಾಗಿ ಕರ್ನಾಟಕ ನಗರ ಮೂಲಸೌಲಭ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ (ಕೆಯುಐಡಿಎಫ್‌ಸಿ) ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮಂಡಳಿಯ ಉಸ್ತುವಾರಿಯನ್ನೂ ವಹಿಸಲಾಗಿದೆ.

ಇದುವರೆಗೂ ಈ ಸಂಸ್ಥೆಗಳ ಉಸ್ತುವಾರಿಯನ್ನು ಜಲಮಂಡಳಿ ಸಚಿವ ಎಸ್.ಸುರೇಶಕುಮಾರ್ ಅವರು ನೋಡಿಕೊಳ್ಳುತ್ತಿದ್ದರು.

ಡಾ. ರಂಗಸ್ವಾಮಿ ಬೆಂಗಳೂರು ವಿವಿ ಹಂಗಾಮಿ ಕುಲಪತಿ
ಬೆಂಗಳೂರು:
ಬೆಂಗಳೂರು ವಿಶ್ವವಿದ್ಯಾಲಯದ ಹಂಗಾಮಿ ಕುಲಪತಿಯನ್ನಾಗಿ ಡಾ.ಎನ್.ರಂಗಸ್ವಾಮಿ ಅವರನ್ನು ನೇಮಕ ಮಾಡಿ ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಮಂಗಳವಾರ ಆದೇಶ ಹೊರಡಿಸಿದ್ದಾರೆ.

ಪಾಲಿಕೆ ಅಭಿಯಾನ
ಬೆಂಗಳೂರು:
ನಗರದಲ್ಲಿ ಡೆಂಗೆ ಮತ್ತಿತರ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಮಹಾನಗರ ಪಾಲಿಕೆ ಅಭಿಯಾನ ಆರಂಭಿಸಿದೆ. ಸೊಳ್ಳೆ ಉತ್ಪತ್ತಿ ತಾಣಗಳಿಗೆ ಔಷಧ ಸಿಂಪಡಿಸಲಾಗುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT