ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಕ್ಷಿಪ್ತ ಸುದ್ದಿ

Last Updated 22 ಏಪ್ರಿಲ್ 2013, 5:56 IST
ಅಕ್ಷರ ಗಾತ್ರ

`ರಾಹುಲ್ ಕಾರ್ಯಕ್ರಮಕ್ಕೆ ಲಕ್ಷ ಜನ'
ವಿಜಾಪುರ:
ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಇದೇ 23ರಂದು ಮಧ್ಯಾಹ್ನ 1.30ಕ್ಕೆ ಇಲ್ಲಿಯ ಸೋಲಾಪುರ ರಸ್ತೆಯ ಬಿಎಲ್‌ಡಿಇ ಹೊಸ ಕ್ಯಾಂಪಸ್‌ನಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದು, ಈ ಕಾರ್ಯಕ್ರಮ ಯಶಸ್ವಿಗೊಳಿಸಲು ನಿರ್ಧರಿಸಲಾಯಿತು.

ಇಲ್ಲಿಯ ಪಕ್ಷದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಕೆಪಿಸಿಸಿ ಸಮನ್ವಯ ಸಮಿತಿ ಸದಸ್ಯ ಎಂ.ಬಿ. ಪಾಟೀಲ, `ಇಡೀ ಜಿಲ್ಲೆಯ ಎಲ್ಲ ಅಭ್ಯರ್ಥಿಗಳಿಗೆ ಅನುಕೂಲವಾಗುವ ದೃಷ್ಠಿಯಿಂದ ವಿಜಾಪುರ ನಗರದಲ್ಲಿ ಸಭೆ ಏರ್ಪಡಿಸಲಾಗಿದೆ. ಇದು ಜಿಲ್ಲೆಯ ಕಾಂಗ್ರೆಸ್ ಪಕ್ಷದ ಶಕ್ತಿ ಪ್ರದರ್ಶನದ ವೇದಿಕೆಯಾಗಲಿದೆ. ಜಿಲ್ಲೆಯ 8 ಮತಕ್ಷೇತ್ರಗಳಿಂದ ತಲಾ 15 ಸಾವಿರ ಕಾರ್ಯಕರ್ತರಂತೆ 1 ಲಕ್ಷ ಜನ ಸೇರಲಿದ್ದಾರೆ' ಎಂದರು.

ಕೆಪಿಸಿಸಿ ವಕ್ತಾರ ಪ್ರಕಾಶ ರಾಠೋಡ, ಜಿಲ್ಲೆಯಲ್ಲಿ ಕಾಂಗ್ರೆಸ್ ಅಲೆ ಹೆಚ್ಚಾಗಿದೆ. ರಾಹುಲ್ ಗಾಂಧಿ ಅವರ ಕಾರ್ಯಕ್ರಮದಿಂದ ಜಿಲ್ಲೆಯ ಪಕ್ಷದ ಎಲ್ಲ ಅಭ್ಯರ್ಥಿಗಳು ಗೆಲ್ಲಲು ಅನುಕೂಲವಾಗುತ್ತದೆ ಎಂದು ಹೇಳಿದರು.

ನಾಗಠಾಣ ಅಭ್ಯರ್ಥಿ ರಾಜು ಆಲಗೂರ, ನಗರ ಅಭ್ಯರ್ಥಿ ಮಕ್ಬೂಲ ಬಾಗವಾನ, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು ಉಪಸ್ಥತರಿದ್ದರು.

ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ ಇಂದು
ವಿಜಾಪುರ:
ಚುನಾವಣೆಗೆ ನಿಯೋಜನೆಗೊಂಡಿರುವ ಮತಗಟ್ಟೆ ಅಧಿಕಾರಿಗಳಿಗೆ ಇದೇ 22ರಂದು ಬೆಳಿಗ್ಗೆ 11ಕ್ಕೆ ಆಯಾ ತಾಲ್ಲೂಕು ಕೇಂದ್ರಗಳಲ್ಲಿ ತರಬೇತಿ ಆಯೋಜಿಸಲಾಗಿದೆ.

ಎಲ್ಲರೂ ಕಡ್ಡಾಯವಾಗಿ ಹಾಜರಾಗಬೇಕು. ಇಲ್ಲದಿದ್ದರೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಶಿವಯೋಗಿ ಕಳಸದ ತಿಳಿಸಿದ್ದಾರೆ.

ಸ್ಮಾರಕ ರಕ್ಷಿಸುವವರಿಗೆ ಮತ ನೀಡಿ: ದಡ್ಡಿ
ವಿಜಾಪುರ:
ಸ್ಮಾರಕಗಳ ರಕ್ಷಣೆಗೆ ಪಣ ತೊಟ್ಟು ಮಾತಿಗೆ ತಕ್ಕಂತೆ ನಡೆದುಕೊಳ್ಳವ ಅಭ್ಯರ್ಥಿಗಳಿಗೆ ಮತ ನೀಡಬೇಕು ಎಂದು ಆರ್ಯ ಟ್ರಸ್ಟ್ ಗೌರವಾಧ್ಯಕ್ಷ ಡಾ.ಎಚ್.ಜಿ. ದಡ್ಡಿ ಮತದಾರರಿಗೆ ಮನವಿ ಮಾಡಿದ್ದಾರೆ.

`ಕಳೆದ ಚುನಾವಣೆಗಳಲ್ಲಿ ಕೆಲ ರಾಜಕಾರಣಿಗಳು ಹಾಗೂ ಪಕ್ಷದವರು ಸ್ಮಾರಕಗಳ ರಕ್ಷಣೆ ಮಾಡುತ್ತೇವೆ ಎಂದು ಭರವಸೆ ನೀಡಿದ್ದರು. ಅವರು ತಮ್ಮ ಮಾತು ಉಳಿಸಿಕೊಳ್ಳಲು ವಿಫಲರಾಗಿದ್ದಾರೆ' ಎಂದು ದೂರಿದ್ದಾರೆ.

ನಗರದಲ್ಲಿ ನೂರಕ್ಕೂ ಹೆಚ್ಚು ಮಹತ್ವದ ಇಮಾರತುಗಳಿವೆ. ಅವು ಜಿಲ್ಲೆಗೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ತಂದು ಕೊಟ್ಟಿವೆ. ಅವುಗಳ ರಕ್ಷಣೆ ಮತ್ತು ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸಬೇಕಿದೆ ಎಂದಿದ್ದಾರೆ.

ಬಿಜೆಪಿ ಅಭ್ಯರ್ಥಿ ಪರ ಮತಯಾಚನೆ
ವಿಜಾಪುರ:
ಬಬಲೇಶ್ವರ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರವಾಗಿ ಸಂಸದ ರಮೇಶ ಜಿಗಜಿಣಗಿ, ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಚಂದ್ರಶೇಖರ ಕವಟಗಿ ಅವರು ಮಮದಾಪುರ, ದೇವರ ಗೆಣ್ಣೂರ ಗ್ರಾಮಗಳಲ್ಲಿ ಮತ ಯಾಚಿಸಿದರು.

ದೇವರ ಗೆಣ್ಣೂರ ಗ್ರಾಮದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅಭ್ಯರ್ಥಿ ಎಂ.ಎಸ್. ರುದ್ರಗೌಡರ, `ರೈತ ಮನೆತನದಿಂದ ಬಂದಿರುವ ನಾನು ರೈತರ ತೊಂದರೆ ಅರಿತವನಾಗಿದ್ದೇನೆ. ಬಬಲೇಶ್ವರ ಮತಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಮತ ನೀಡಬೇಕು' ಎಂದು ಮನವಿ ಮಾಡಿದರು.

ಪ್ರಮುಖರಾದ ಸೊಮನಗೌಡ ಪಾಟೀಲ, ಸಂಜಯ ಪಾಟೀಲ ಕನಮಡಿ, ಜಿ.ಪಂ. ಸದಸ್ಯ ಮಲ್ಲು ಕನ್ನೂರ, ರಾಜು ಕೋರಿ, ಮುತ್ತನಗೌಡ ಪಾಟೀಲ, ಕಲ್ಲಪ್ಪ ಕೊಡಬಾಗಿ, ಸದಾಶಿವ ಮಳ್ಳಿ ಇತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT