ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಗೀತ ರತ್ನ ಪ್ರಶಸ್ತಿ ಪ್ರದಾನ

Last Updated 22 ಜನವರಿ 2012, 19:30 IST
ಅಕ್ಷರ ಗಾತ್ರ

ವೀಯೆಲ್ಲೆನ್-ನಿರ್ಮಾಣ್-ಪುರಂದರ ಪ್ರತಿಷ್ಠಾನವು ಸೋಮವಾರ ಪುರಂದರದಾಸರ ಆರಾಧನಾ ಮಹೋತ್ಸವ ಹಾಗೂ ಪುರಂದರ ಸಂಗೀತ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಂಡಿದೆ.

ಗಾಯಕ ಡಾ.ಆರ್.ಕೆ. ಶ್ರೀಕಂಠನ್ ಅವರು `2012ರ ನಿರ್ಮಾಣ್-ಪುರಂದರ-ಸಂಗೀತರತ್ನ~ ಪ್ರಶಸ್ತಿಗೆ ಭಾಜನರಾಗಿದ್ದು, ಇವರಿಗೆ ಉಡುಪಿಯ ಭಂಡಾರಕೇರಿ ಮಠದ ವಿದ್ಯೇಶತೀರ್ಥ ಸ್ವಾಮೀಜಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಕರ್ನಾಟಕ ಶಾಸ್ತ್ರೀಯ ಸಂಗೀತ ಸುಧೆಯನ್ನು ಶೋತೃಗಳಿಗೆ ಉಣಬಡಿಸುವ ಶ್ರೀಕಂಠನ್ ಅವರು ಈ ಪರಂಪರೆಯನ್ನು ಮುಂದಿನ ತಲೆಮಾರಿಗೂ ಉಳಿಸಿ, ಬೆಳೆಸುವ ಕಾಯಕದಲ್ಲಿ ತೊಡಗಿದ್ದಾರೆ. ಭಕ್ತಿ ಪಂಥದ ದಾಸ ಪರಂಪರೆಯನ್ನು ಬೆಳೆಸುವ ಸಲುವಾಗಿ ಕಳೆದ ಮೂರು ವರ್ಷಗಳಿಂದ ಸಂಸ್ಥೆ ಈ ಪ್ರಶಸ್ತಿ ನೀಡುತ್ತಾ ಬಂದಿದೆ.

ಪ್ರಶಸ್ತಿ ಪ್ರದಾನ ಬಳಿಕ ಆರ್.ಕೆ.ಶ್ರೀಕಂಠನ್ ಮತ್ತು ತಂಡದವರಿಂದ ದಾಸವಾಣಿ. ಅತಿಥಿ: ಗೋಪಾಲ್ ಬಿ.ಹೊಸೂರು.

ಸ್ಥಳ: ವೆಂಕಟೇಶ್ವರ ದೇವಾಲಯದ ಎದುರು, ನಿಸರ್ಗ ಬಡಾವಣೆ, ಕೊಪ್ಪಗೇಟ್ ಸಮೀಪ, ಬನ್ನೇರುಘಟ್ಟ. ಸಂಜೆ 6ರಿಂದ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT