ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಗೀತ ವಿ.ವಿ ವ್ಯಾಪ್ತಿಗೆ ಚಿತ್ರಕಲಾ ಮಹಾವಿದ್ಯಾಲಯ

Last Updated 4 ಜನವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಸದ್ಯ ಹಂಪಿ ಕನ್ನಡ ವಿಶ್ವವಿದ್ಯಾಲಯದ ಅಧೀನದಲ್ಲಿರುವ ಚಿತ್ರಕಲಾ ಮಹಾವಿದ್ಯಾಲಯಗಳನ್ನು ಹೊಸದಾಗಿ ಸ್ಥಾಪನೆಯಾಗಿರುವ ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾಲಯಕ್ಕೆ ವರ್ಗಾಯಿಸಿ ಸರ್ಕಾರ ಆದೇಶ ಹೊರಡಿಸಿದೆ.

ಮುಂದಿನ ಶೈಕ್ಷಣಿಕ ಸಾಲಿನಿಂದ ಜಾರಿಗೆ ಬರುವಂತೆ ಈ ಆದೇಶ ಹೊರಡಿಸಲಾಗಿದ್ದು, ರಾಜ್ಯದಲ್ಲಿನ ಎಲ್ಲ ಚಿತ್ರಕಲಾ ಮಹಾವಿದ್ಯಾಲಯಗಳ ಶೈಕ್ಷಣಿಕ ಮತ್ತು ಪರೀಕ್ಷಾ ಕಾರ್ಯಗಳ ಜವಾಬ್ದಾರಿಯನ್ನು ಮೈಸೂರಿನಲ್ಲಿರುವ ಗಂಗೂಬಾಯಿ ಹಾನಗಲ್ ಸಂಗೀತ ವಿಶ್ವವಿದ್ಯಾಲಯ ನೋಡಿಕೊಳ್ಳಲಿದೆ.

ಚಿತ್ರಕಲಾ ಮಹಾವಿದ್ಯಾಲಯಗಳ ವಸ್ತು ವಿಷಯವು ಪ್ರದರ್ಶನ ಕಲೆಗಳ ವಿಶ್ವವಿದ್ಯಾಲಯಕ್ಕೆ ಸೇರುವುದರಿಂದ ಈ ಬದಲಾವಣೆ ಮಾಡಲಾಗಿದೆ. ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಚಿತ್ರಕಲಾ ಮಹಾವಿದ್ಯಾಲಯಗಳಿಗೂ ಇದು ಅನ್ವಯವಾಗಲಿದೆ ಎಂದು ಉನ್ನತ ಶಿಕ್ಷಣ ಇಲಾಖೆ ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT