ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಘಟನೆಗಳು ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಲಿ

Last Updated 7 ಅಕ್ಟೋಬರ್ 2011, 6:20 IST
ಅಕ್ಷರ ಗಾತ್ರ

ಯಳಂದೂರು: ಪ್ರಗತಿಪರ ಸಂಘಟನೆಗಳು ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವ ಮೂಲಕ ಸುಧಾರಿತ ಸಮಾಜದ ನಿರ್ಮಾಣಕ್ಕೆ ಸಹಕರಿಸಬೇಕೆಂದು ಶಾಸಕ ಜಿ.ಎನ್. ನಂಜುಂಡಸ್ವಾಮಿ ಮನವಿ ಮಾಡಿದರು.

ಅವರು ಈಚೆಗೆ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಸಿದ್ಧಾರ್ಥ ವಿದ್ಯಾಸಂಸ್ಥೆಯ ಪ್ರೌಢಶಾಲಾ ಕಟ್ಟಡಕ್ಕೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಹಿಂದುಳಿದ ಜನಾಂಗದಲ್ಲಿ ಶಿಕ್ಷಿತರ ಸಂಖ್ಯೆ ಕಡಿಮೆ ಇದೆ. ಅನಕ್ಷರತೆಯಿಂದ ಸಮಾಜದ ಸ್ವಾಸ್ಥ್ಯ ಹಾಳಾಗುತ್ತದೆ. ಹಾಗಾಗಿ ಸುಶಿಕ್ಷಿತ ಸಮಾಜದ ನಿರ್ಮಾಣದತ್ತ ಒಲವು ತೋರುವ ಅಗತ್ಯತೆ ಇದೆ ಎಂದರು.

 ಗ್ರಾಮೀಣ ಭಾಗದಲ್ಲಿ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಖಾಸಗಿ ದಲಿತ ವಿದ್ಯಾಸಂಸ್ಥೆಯು ಕರ್ತವ್ಯ ನಿರ್ವಹಿಸುತ್ತಿರುವುದು ಶ್ಲಾಘನೀಯ. ಕಟ್ಟಡ ನಿರ್ಮಾಣಕ್ಕೆ ತಮ್ಮ ಅನುದಾನದಡಿಯಲ್ಲಿ 5 ಲಕ್ಷ ರೂ. ಬಿಡುಗಡೆ ಮಾಡಲಾಗುವುದು ಎಂದ ಅವರು, ಮುಂದಿನ ದಿನಗಳಲ್ಲಿ ಸಂಸದರು ಹಾಗೂ ವಿಧಾನ ಪರಿಷತ್ ಸದಸ್ಯರ ಜೊತೆ ಚರ್ಚಿಸಿ ಮತ್ತಷ್ಟು ಹಣ ಬಿಡುಗಡೆ ಮಾಡುವ ಭರವಸೆ ನೀಡಿದರು.

ಕಾರ್ಯಕಾರಿ ಸಮಿತಿ ಸದಸ್ಯ ಹೊನ್ನೂರು ಬಿ. ನಂಜುಯ್ಯ, ಮೊದಲ ಕಂತಿನಲ್ಲಿ 5001 ರೂ. ಗಳ ದೇಣಿಗೆಯನ್ನು ನೀಡಿದರು. ಪ.ಪಂ. ಅಧ್ಯಕ್ಷೆ ಮೀನಾಕ್ಷಿಮಹದೇವಸ್ವಾಮಿ, ಸದಸ್ಯ ಮಲ್ಲಯ್ಯ, ತಾ.ಪಂ. ಅಧ್ಯಕ್ಷೆ ಗೌರಮ್ಮ ಮಹದೇವಸ್ವಾಮಿ,               ಉಪಾಧ್ಯಕ್ಷೆ ವಿಜಯಲಕ್ಷ್ಮಿ ನಂಜುಂಡ, ಸದ್ಯರಾದ ವೆಂಕಟಾಚಲ, ಕೆ.ಪಿ. ಶಿವಣ್ಣ, ಕಾರ್ಯಕಾರಿ ಸಮಿತಿ ಸದಸ್ಯ ಕೆ.ಪಿ. ಜವರಯ್ಯ, ನಂಜುಂಡಸ್ವಾಮಿ, ಶ್ರೀನಿವಾಸಮೂರ್ತಿ, ಸಿದ್ಧಯ್ಯ, ಜವರಯ್ಯ, ನಂಜಯ್ಯ, ನಾಗರಾಜು, ಮಾದಯ್ಯ, ಕೃಷ್ಣಯ್ಯ, ಸಿದ್ಧರಾಜು, ಕೆ. ಸಿದ್ಧರಾಜು, ಬಿ. ಲಿಂಗಯ್ಯ, ತಹಶೀಲ್ದಾರ್             ಜಗದೀಶ್, ಇಒ ಚಿಕ್ಕಲಿಂಗಯ್ಯ ಇತರರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT