ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಘವನ್ನು ಬ್ಯಾಂಕ್‌ ಆಗಿ ಪರಿವರ್ತಿಸಲು ಸಲಹೆ

Last Updated 25 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ನೆಲಮಂಗಲ: ವಿದ್ಯಾ ಇಲಾಖೆ ನೌಕರರ ಸಹಕಾರ ಸಂಘವನ್ನು ಬ್ಯಾಂಕ್‌ ಆಗಿ ಪರಿರ್ತಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಾನಾಯಕ್‌ ಸಲಹೆ ನೀಡಿದರು.

ಪಟ್ಟದ ಗುರುಭವನದಲ್ಲಿ ಏರ್ಪಡಿಸಿದ್ದ ತಾಲ್ಲೂಕು ವಿದ್ಯಾ ಇಲಾಖಾ ನೌಕರರ ಸಹಕಾರ ಸಂಘದ ಸರ್ವಸದಸ್ಯರ ವಾರ್ಷಿಕ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಅಧ್ಯಕ್ಷ ವಿ.ಸಿ.ನಾಗರಾಜ ಮೂರ್ತಿ, ‘ಸಂಘದ ಸದಸ್ಯರ ಸಹಕಾರಿ ಮನೋಭಾವದಿಂದ ಸಂಘವು ಸದೃಢವಾಗಿ ಬೆಳೆಯಲು ಸಾಧ್ಯವಾಗಿದೆ. ಮುಂದಿನ ದಿನಗಳಲ್ಲಿ ಎಲ್ಲ ಶಿಕ್ಷಕರನ್ನು ಸದಸ್ಯರನ್ನಾಗಿ ಮಾಡುವ ಹೊಣೆ ನಮ್ಮ ಮೇಲಿದೆ’ ಎಂದರು.

ಈ ಸಂದರ್ಭ ಸದಸ್ಯರ ಪ್ರತಿಭಾವಂತ ಮಕ್ಕಳನ್ನು ಪುರಸ್ಕರಿಸಲಾಯಿತು. ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಜಿ.ವಿ.ಕುಮಾರ್, ಸಂಘದ ಮಾಜಿ ಅಧ್ಯಕ್ಷರಾದ ಎನ್.ಬಸಣ್ಣ, ಎನ್.ಗಿರೀಶ್, ನಿರ್ದೇಶಕರಾದ ರಾಜಶೇಖರ್, ಬಿ.ಶಿವಕುಮಾರ್, ತಿಮ್ಮೇಗೌಡ, ನಾಗೇಶ್  ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT