ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಜೆ ಎಂಜಿನಿಯರಿಂಗ್ ಕಾಲೇಜು ಪ್ರವೇಶ: ಬದಲಾವಣೆಗೆ ಆಗ್ರಹ

Last Updated 3 ಜುಲೈ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: `ಸಂಜೆ ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಸಂಜೆ ಎಂಜಿನಿಯರಿಂಗ್ ಕಾಲೇಜಿಗೆ ಪ್ರವೇಶ ಪಡೆಯಲು ಅನುಕೂಲವಾಗಲು ಈಗ ಇರುವ ನಿಯಮಗಳಲ್ಲಿ ಬದಲಾವಣೆ ಮಾಡಬೇಕು~ ಎಂದು ಸಂಜೆ ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.

`ತಾಂತ್ರಿಕ ಶಿಕ್ಷಣ ಇಲಾಖೆಯ ನಿಯಮಗಳ ಪ್ರಕಾರ ಡಿಪ್ಲೊಮಾ ಮುಗಿಸಿದ ಬಳಿಕ ಎಂಜಿನಿಯರಿಂಗ್ ಪ್ರವೇಶ ಪಡೆಯಲು ಒಂದು ವರ್ಷ ಕಾರ್ಖಾನೆಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿರಬೇಕು.

ಆದರೆ ಸಂಜೆ ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಹಲವಾರು ಕೈಗಾರಿಕಾ ಸಂಸ್ಥೆಗಳಲ್ಲಿ ಉದ್ಯೋಗ ನಿರ್ವಹಿಸುತ್ತಾ ವ್ಯಾಸಂಗ ಮಾಡುತ್ತಾರೆ. ವಿದ್ಯಾರ್ಥಿಗಳ ಈ ಕೈಗಾರಿಕಾ ಅನುಭವವನ್ನು ಪರಿಗಣಿಸಿ ಈಗಿರುವ ನಿಯಮದಲ್ಲಿ ಬದಲಾವಣೆ ತರಬೇಕು~ ಎಂದು ವಿದ್ಯಾರ್ಥಿ ನಟೇಶ್ ಒತ್ತಾಯಿಸಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT