ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಪನ್ಮೂಲ ಕೇಂದ್ರ ಬಲವರ್ಧನೆ ಗೊಳಿಸಿ

Last Updated 9 ಫೆಬ್ರುವರಿ 2011, 10:10 IST
ಅಕ್ಷರ ಗಾತ್ರ

ನಾಯಕನಹಟ್ಟಿ: ಸಮೂಹ ಸಂಪನ್ಮೂಲ ಕೇಂದ್ರ ಬಲವರ್ಧನೆಗೆ ಸ್ಥಳೀಯ ಸಂಸ್ಥೆಗಳು, ಜನಪ್ರತಿನಿಧಿಗಳ ಸಹಕಾರ ಅಗತ್ಯ ಎಂದು ಪ್ರಜಾಯತ್ನ ಸಂಸ್ಥೆಯ ಜಿಲ್ಲಾ ಸಂಯೋಜಕ ಎಂ. ರಮೇಶ್ ಹೇಳಿದರು.ಇಲ್ಲಿನ ಸಮೂಹ ಸಂಪನ್ಮೂಲ ಕೇಂದ್ರದಲ್ಲಿ ಮಂಗಳವಾರ ಎಸ್‌ಡಿಎಂಸಿ ಮತ್ತು ಮುಖ್ಯಶಿಕ್ಷಕರಿಗೆ ಏರ್ಪಡಿಸಿದ್ದ ಕಾರ್ಯಾಗಾರದಲ್ಲಿ ಅವರು  ಮಾತನಾಡಿದರು.

‘ಪ್ರಜಾಯತ್ನ’ ಸಂಸ್ಥೆಯು ಸರ್ಕಾರದ ನೆರವಿನೊಂದಿಗೆ ರಾಜ್ಯದ 22 ಜಿಲ್ಲೆಗಳಲ್ಲಿ 300 ಸಮೂಹ ಸಂಪನ್ಮೂಲ ಕೇಂದ್ರಗಳನ್ನು ಆಯ್ಕೆ ಮಾಡಿಕೊಂಡು ಉನ್ನತೀಕರಿಸಲು ಪ್ರಯತ್ನಿಸುತ್ತಿದೆ. ಇದಕ್ಕೆ ಸ್ಥಳೀಯರ ಅಭಿಪ್ರಾಯ, ಸಲಹೆ-ಸೂಚನೆಗಳು ಮುಖ್ಯ. ಜಿಲ್ಲೆಯಲ್ಲಿ ಒಟ್ಟು 12 ಸಂಪನ್ಮೂಲ ಕೇಂದ್ರಗಳನ್ನು ಬಲವರ್ಧನೆ ಗೊಳಿಸಲಾಗುತ್ತಿದ್ದು, ಚಳ್ಳಕೆರೆ ತಾಲ್ಲೂಕಿನಲ್ಲಿ ಹಿರೇಹಳ್ಳಿ, ನಾಯಕನಹಟ್ಟಿ ಕೇಂದ್ರಗಳನ್ನು ಆಯ್ಕೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಸಮೂಹ ಸಂಪನ್ಮೂಲ ಕೇಂದ್ರದಲ್ಲಿ ಶಿಕ್ಷಕರಿಗೆ ತರಬೇತಿ, ಸಮಾಲೋಚನೆ ನೀಡಿ, ಗುಣಮಟ್ಟದ ಶಿಕ್ಷಣವನ್ನು ನೀಡಲು ಸಹಕಾರಿಯಾಗುತ್ತದೆ ಎಂದರು.ಶಿಕ್ಷಣ ಸಂಯೋಜಕ ಜಕಣಾಚಾರಿ ಮಾತನಾಡಿ, ಶಿಕ್ಷಕರಿಗೆ ಸಂಪನ್ಮೂಲ ಕೇಂದ್ರದಿಂದ ಅಗತ್ಯ ಮಾಗದರ್ಶನ, ತರಬೇತಿ ಮುಖ್ಯ. ಸಂಪನ್ಮೂಲ ಕೇಂದ್ರದ ಉಪಯೋಗವನ್ನು ಮಾಡಿಕೊಂಡು ಶಿಕ್ಷಕರು ಗುಣಮಟ್ಟದ ಶಿಕ್ಷಣವನ್ನು ನೀಡಿರಿ ಎಂದು ಸಲಹೆ ನೀಡಿದರು.

ಸರ್ಕಾರಿ ನೌಕರರ ಸಂಘದ ನಿರ್ದೇಶಕ ಜಿ.ಟಿ. ಸ್ವಾಮಿ ಮಾತನಾಡಿದರು,ವಿವಿಧ ಗ್ರಾ.ಪಂ. ಅಧ್ಯಕ್ಷರಾದ ಹನುಮಂತಪ್ಪ, ತಿಪ್ಪೇಸ್ವಾಮಿ, ಪಿಡಿಒ ರಾಘವೇಂದ್ರ, ಶಿಕ್ಷಣ ಸಂಯೋಜಕ ರಾಮಯ್ಯ, ಸಮೂಹ ಸಂಪನ್ಮೂಲ ವ್ಯಕ್ತಿ ತಿಪ್ಪೇಸ್ವಾಮಿ ಹಾಜರಿದ್ದರು. ಶಿಕ್ಷಕ ತಿಪ್ಪೇರುದ್ರಪ್ಪ ಕಾರ್ಯಕ್ರಮ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT