ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಪುಟ ಸಭೆ: ಅನಿಮೇಷನ್ ನೀತಿಗೆ ಅನುಮೋದನೆ

Last Updated 3 ಜನವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಅನಿಮೇಷನ್ ಉದ್ಯಮವನ್ನು ಪ್ರೋತ್ಸಾಹಿಸುವ ಗುರಿ ಹೊಂದಿರುವ `ಕರ್ನಾಟಕ ಅನಿಮೇಷನ್ ಮತ್ತು ಗೇಮಿಂಗ್ ನೀತಿ~ಗೆ ಮಂಗಳವಾರ ಸಚಿವ ಸಂಪುಟ ಸಭೆಯ ಅನುಮೋದನೆ ದೊರೆತಿದೆ.

ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಮಾದರಿಯಲ್ಲೇ ಅನಿಮೇಷನ್ ಉದ್ಯಮವನ್ನು ಪ್ರೋತ್ಸಾಹಿಸುವುದು, ಪೂರಕವಾದ ತರಬೇತಿ ಸಂಸ್ಥೆಗಳ ಸ್ಥಾಪನೆಗೆ ನೆರವು ನೀಡುವುದು, ಉದ್ಯೋಗಾವಕಾಶಗಳ ಸೃಷ್ಟಿ ಮತ್ತಿತರ ಅಂಶಗಳನ್ನು ಈ ನೀತಿ ಒಳಗೊಂಡಿದೆ. ದೇಶದಲ್ಲಿ ಮೊದಲ ಬಾರಿಗೆ ಕರ್ನಾಟಕದಲ್ಲಿ ಈ ನೀತಿ ರೂಪಿಸಲಾಗಿದೆ.

ಪರಿಹಾರ ನೀತಿ: ಸುಪ್ರೀಂಕೋರ್ಟ್‌ನ ನಿರ್ದೇಶನದಂತೆ ಕೇಂದ್ರ ಸರ್ಕಾರ ರೂಪಿಸಿರುವ `ಸಂತ್ರಸ್ತರ ಪರಿಹಾರ ನೀತಿ~ಯನ್ನು ರಾಜ್ಯದಲ್ಲೂ ಅಳವಡಿಸಿಕೊಳ್ಳುವ ಪ್ರಸ್ತಾವಕ್ಕೆ ಸಂಪುಟ ಒಪ್ಪಿಗೆ ಸೂಚಿಸಿದೆ. ಯಾವುದೇ ಗಲಭೆ, ಘರ್ಷಣೆ, ದುರ್ಘಟನೆಗಳ ಸಂದರ್ಭದಲ್ಲಿ ಸಾವಿಗೀಡಾಗುವವರ ಕುಟುಂಬ ಸದಸ್ಯರು ಮತ್ತು ಗಾಯಾಳುಗಳಿಗೆ ತಕ್ಷಣದ ಪರಿಹಾರ ನೀಡಲು ಈ ನೀತಿ ಸಹಕಾರಿಯಾಗಲಿದೆ.

ಈ ನೀತಿಯ ಪ್ರಕಾರ, ಸಂತ್ರಸ್ತರು ಘಟನೆ ನಡೆದ ತಕ್ಷಣ ಜಿಲ್ಲಾ ಕಾನೂನು ಸೇವಾ ಸಮಿತಿ ಮೂಲಕ ಪರಿಹಾರಕ್ಕೆ ಅರ್ಜಿ ಸಲ್ಲಿಸಬಹುದು. ಜಿಲ್ಲಾ ನ್ಯಾಯಾಧೀಶರ ನೇತೃತ್ವದ ಸಮಿತಿಯು ಅರ್ಜಿಯನ್ನು ಪರಿಶೀಲಿಸಿ, ಅರ್ಹರಿಗೆ ಪರಿಹಾರ ದೊರಕಿಸುತ್ತದೆ.

ತಿದ್ದುಪಡಿಗೆ ಒಪ್ಪಿಗೆ: ಪರಿಶಿಷ್ಟ ಜಾತಿಯಲ್ಲಿನ ಉಪ ಪಂಗಡಗಳಿಗೆ ಒಳ ಮೀಸಲಾತಿ ಕಲ್ಪಿಸಲು ಪೂರಕವಾಗಿ ಸಂವಿಧಾನಕ್ಕೆ ತಿದ್ದುಪಡಿ ತರುವ ಕೇಂದ್ರ ಸರ್ಕಾರದ ಪ್ರಸ್ತಾವಕ್ಕೆ ರಾಜ್ಯ ಸಚಿವ ಸಂಪುಟ ಸಹಮತ ವ್ಯಕ್ತಪಡಿಸಿದೆ.
ಈ ಕುರಿತ ಪ್ರಸ್ತಾವಕ್ಕೆ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಪರಿಶಿಷ್ಟ ಜಾತಿಯಲ್ಲಿನ ಉಪ ಪಂಗಡಗಳನ್ನು ಗುರುತಿಸುವುದು, ಒಳ ಮೀಸಲಾತಿ ಸೌಲಭ್ಯ ಕಲ್ಪಿಸುವುದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಾಡಿರುವ ಶಿಫಾರಸುಗಳನ್ನೂ ರಾಜ್ಯ ಸರ್ಕಾರ ಒಪ್ಪಿಕೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT