ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಭ್ರಮದ ಸಾಂಸ್ಕೃತಿಕ ಹಬ್ಬ

Last Updated 12 ಜನವರಿ 2012, 19:30 IST
ಅಕ್ಷರ ಗಾತ್ರ

ಕನಕಪುರ: ತಾಲ್ಲೂಕಿನ ಬ್ಲಾಸಮ್ ಶಾಲೆಯ ಇಪ್ಪತ್ತನೆಯ ವರ್ಷದ ಸಾಂಸ್ಕೃತಿಕ ಹಬ್ಬವನ್ನು ಗುರುವಾರ ಅದ್ದೂರಿಯಾಗಿ ಆಚರಿಸಲಾಯಿತು.

ಹತ್ತನೇ ತರಗತಿ ವಿದ್ಯಾರ್ಥಿ ಉಮ್ಮೇಹಾನಿ ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದರು.
ಕಾರ್ಯಕ್ರಮದ ಮುಖ್ಯ ಅತಿಥಿ ಐದನೇ ತರಗತಿಯ ಆರ್.ಅನುಶ್ರೀ. `ಶಾಲೆಯಲ್ಲಿ ಎಲ್ಲ ಮಕ್ಕಳಿಗೂ ಪ್ರತಿಭಾ ಪ್ರದರ್ಶನದಲ್ಲಿ ಸಮಾನ ಅವಕಾಶ ನೀಡಿ, ಮಕ್ಕಳ ಅಭಿವೃದ್ಧಿಗೆ ಶ್ರಮಿಸುತ್ತಿರುವ ಶಾಲೆಯ ಸಂಸ್ಥಾಪಕರಿಗೆ ಕೃತಜ್ಞತೆ ಸಲ್ಲಿಸುತ್ತೇನೆ~ ಎಂದರು.

ಪಿ.ಕೆ.ಜಿ ತರಗತಿಯಿಂದ 10 ನೇ ತರಗತಿವರೆಗಿನ ಮಕ್ಕಳು ಹಿಂದೂಸ್ಥಾನಿ ಗಾಯನ, ಭರತನಾಟ್ಯ, ನಾಟಕ, ತಬಲಾ  ವಿವಿಧ ನೃತ್ಯಗಳ ಮೂಲಕ ಮನಸೂರೆಗೊಳ್ಳುವ ವರ್ಣರಂಜಿತ ಕಾರ್ಯಕ್ರಮ ನೀಡಿ ಪ್ರೇಕ್ಷಕರಿಂದ ಪ್ರಶಂಸೆ ಪಡೆದರು. ಹತ್ತನೇ ತರಗತಿಯ ವಿದ್ಯಾ.ಕೆ.ವಿ ಸ್ವಾಗತಿಸಿದರು. ಅನುಷಾ.  ಎಸ್ ಶಾಲಾ ವರದಿ ಮಂಡಿಸಿದರು.

ಮಕ್ಕಳಿಗಾಗಿ `ಯಂಗ್ ರೀಡರ್ ಅವಾರ್ಡ್~ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಅದರಲ್ಲಿ ವಿಜೇತರಾದವರಿಗೆ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಯಿತು. ಟ್ರಸ್ಟ್‌ನ ಅಧ್ಯಕ್ಷ ಡಾ.ಶ್ವೇತಾ ಶಶಿಧರ್ ವಿಜೇತ ಮಕ್ಕಳಿಗೆ ಬಹುಮಾನವನ್ನು ವಿತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT