ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಭ್ರಮದ ಸಿದ್ಧಲಿಂಗೇಶ್ವರ ಪಲ್ಲಕ್ಕಿ ಉತ್ಸವ

Last Updated 6 ಸೆಪ್ಟೆಂಬರ್ 2013, 6:33 IST
ಅಕ್ಷರ ಗಾತ್ರ

ಯಾದಗಿರಿ: ಸಮೀಪದ ಗುರುಸುಣಿಗಿ ಗ್ರಾಮದ ಬೆಟ್ಟದ ಸಿದ್ಧಲಿಂಗೇಶ್ವರ ದೇವಸ್ಥಾನ ಜಾತ್ರಾ ಮಹೋತ್ಸವದ ಅಂಗವಾಗಿ ಬುಧವಾರ ವಿಜೃಂಭಣೆಯ ಪಲ್ಲಕ್ಕಿ ಉತ್ಸವ ನಡೆಯಿತು.

ಶ್ರಾವಣ ಮಾಸದ ಪ್ರಯುಕ್ತ ಸಿದ್ಧಲಿಂಗೇಶ್ವರ ದೇವಸ್ಥಾನದ ಪಲ್ಲಕ್ಕಿ ಉತ್ಸವದ ಮೆರವಣಿಗೆ ಅದ್ದೂರಿಯಾಗಿ ನಡೆಯಿತು. ಸಂಜೆ ಸಮೀಪದ ಭೀಮಾ ನದಿಗೆ ತೆರಳಿ ಗಂಗಾಸ್ನಾನ, ಪ್ರಸಾದ ವಿತರಣೆ, ಡೊಳ್ಳು-ಬಾಜಾ-ಭಜಂತ್ರಿ ನಡೆಯಿತು.

ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಸಾವಿರಾರು ಭಕ್ತರ ಹರ್ಷೋದ್ಘಾರಗಳ ಮಧ್ಯೆ  ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಂಚರಿಸಿತು.

ಶ್ರಾವಣ ಮಾಸದ ನಿಮಿತ್ತ ಒಂದು ತಿಂಗಳಿನಿಂದ ಸಿದ್ಧಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಭಜನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಶುಕ್ರವಾರ ಸಿದ್ಧಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ನಡೆಯಲಿದೆ ಎಂದು ದೇವಸ್ಥಾನದ ಸಮಿತಿಯ ಮಲ್ಲಿಕಾರ್ಜುನಸ್ವಾಮಿ ಹಿರೇಮಠ ಹಾಗೂ ಗ್ರಾಮ ಪಂಚಾಯಿತಿ ಸದಸ್ಯ ಸಿದ್ಧಬಸ್ಸಯ್ಯ ಗುಡಿಮಠ  ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT